ಬೆಂಗಳೂರು:ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡುವ ‘ಅಮೃತ ಜ್ಯೋತಿ’ ಯೋಜನೆ ಸದ್ಯ ಚಾಲ್ತಿಯಲ್ಲಿ ಇದೆ. ಆದರೆ ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳು ಮತ್ತು ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ “ಅಮೃತ ಜ್ಯೋತಿ” ಕಾರ್ಯಕ್ರಮದಡಿ 75 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಹಿಂದಕ್ಕೆ ಪಡೆದಿರುವುದಿಲ್ಲ ಎಂದು ಇಲಾಖೆ ಹೇಳಿದೆ.
‘ಅಮೃತ ಜ್ಯೋತಿ’ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಕಳೆದ ಮೇ 18ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಈ ಸಂಬಂಧ ಆಗಸ್ಟ್ 24ರಂದು ಮಾರ್ಗಸೂಚಿ ಸುತ್ತೋಲೆ ಹೊರಡಿಸಲಾಗಿತ್ತು. ಇದಕ್ಕೆ ಕೆಲವೊಂದು ತಿದ್ದುಪಡಿ ಅಗತ್ಯ ಇದ್ದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 3ರಂದು ಅದನ್ನು ಹಿಂದಕ್ಕೆ ಪಡೆಯಲಾಗಿದೆಯಷ್ಟೇ ವಿನಾ ಯೋಜನೆಯನ್ನು ರದ್ದುಗೊಳಿಸಲಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅದು ತಿಳಿಸಿದೆ.
ಈ ಯೋಜನೆಯ ಪ್ರಯೋಜನವು ಸುಮಾರು 39 ಲಕ್ಷ ಬಿಪಿಎಲ್ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ಮೊತ್ತವನ್ನು ಸುಮಾರು 15 ಸಾವಿರ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಇಂಧನ ಇಲಾಖೆಯು ತಿಳಿಸಿದೆ.
ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್ ಬಿಲ್ಲಿನ ಮೊತ್ತದಲ್ಲಿ 75 ಯೂನಿಟ್‍ಗಳವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.
ಬಿಜೆಪಿ ಜನಬಲ ಪ್ರದರ್ಶನಕ್ಕೆ ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಜ್ಜು: ಸಿಎಂ ಬೊಮ್ಮಾಯಿ‌, ಸ್ಮೃತಿ ಇರಾನಿ ಭಾಗಿ

ಕನ್ನಡದಲ್ಲಿ ಬರೆದ ಚೆಕ್​ ಅಮಾನ್ಯ: ಎಸ್​ಬಿಐಗೆ ಧಾರವಾಡದ ಗ್ರಾಹಕರ ಕೋರ್ಟ್​ನಿಂದ ದಂಡ

ತುಮಕೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಮೇಯರ್​, ಉಪ ಮೇಯರ್ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − four =
Remember me
