ಹಾಸನ:ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಕ್ಯಾಂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ತಮಿಳುನಾಡು ಮೂಲದ ಅಂಜನಪ್ಪ (40), ಪುತ್ರ ಕಾರ್ತಿಕ್ (17) ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಆಲೂರು-ಈಶ್ವರಹಳ್ಳಿ ರಸ್ತೆಯ ಕೂಡಿಗೆ ಸಮೀಪ ಈ ಘಟನೆ ಸಂಭವಿಸಿದೆ.
ಮೃತರು ಧರ್ಮಸ್ಥಳಕ್ಕೆ ಹೊರಟಿದ್ದರು. ಎರಡು ಕಾರಿನಲ್ಲಿ 10 ಮಂದಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೆದ್ದಾರಿಯ ಹಲವೆಡೆ ಹಲವು ವರ್ಷಗಳಿಂದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕೆಲ ವರ್ಷವಾದರೂ ಕಾಮಗಾರಿ ಮುಗಿಯದೇ ಇರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾಣಾಪಾಯದಿಂದ ಪಾರಾದ ಕಿರಣ್​ ರಾಜ್​: ದೃಷ್ಟಿ ಹೆಚ್ಚಾಯ್ತು ಎಂದು ಬರೆದುಕೊಂಡ ನಟ

ಪತಿ ಮೇಕಪ್​ ಮಾಡ್ತಾರೆ… ಹೇರ್​ಬ್ಯಾಂಡ್​ ಹಾಕ್ತಾರೆ… ಪತಿ ವಿರುದ್ಧ ಕೋರ್ಟ್​ ಮೊರೆ ಹೋದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 18 =
Remember me
