ತುಮಕೂರು:ಬೆಳ್ಳಂಬೆಳಗ್ಗೆ ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್​ (37), ಮಾನ್ಯ (17), ಮೃತ ದುರ್ದೈವಿಗಳು. ಇವರಿಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಝೈಲೋ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾಯಾಳುಗಳನ್ನ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಮದ್ವೆಯಾಗಿದ್ದು ಯಾವಾಗ್ರಿ? ಎಷ್ಟು ವರ್ಷಕ್ಕೆ ಮಕ್ಕಳು ಮಾಡಿದ್ರು? 21ಕ್ಕೇ ಆಗತ್ತೇನ್ರಿ: ಈಶ್ವರಪ್ಪ ಕಿಡಿ

ಅಗ್ನಿಪಥ್​ v/s ಕಾಂಗ್ರೆಸ್​- ಎಲ್ಲಿದ್ದೆ ಇಲ್ಲೀ ತನಕ…ಈಗ್ಯಾಕೆ ಬಂದ್ಯಯ್ಯ: ವಿಂಗ್​ ಕಮಾಂಡರ್​ ಹೇಳಿದ್ದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
