ವಿಜಯಪುರ: ಗಣೇಶ ಚತುರ್ಥಿಯ ದಿನವಾದ ನಿನ್ನೆ (ಆ.31) ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ಕಲಬುರಗಿ ಜಿಲ್ಲೆಯ ಮೂಲದಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25) ಅವರ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ (55) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಒಂದು ಕಾರಿನ ಚಾಲಕ, ಇನ್ನೊಂದು ಕಾರಿಗೆ ಓವರ್​ಟೇಕ್​ ಮಾಡುವ ಭರದಲ್ಲಿ ಈ ಅವಘಡ ಸಂಭವಿಸಿದೆ. ಕಾರು ಓವರ್ ಟೇಕ್ ಮಾಡಲು ಹೋಗಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ ತಿರುಗಿದ ಕಾರಿಗೆ ಹಿಂಬದಿಯಿಂದ ಬಸ್​ ಗುದ್ದಿದೆ. ಈ ಘಟನೆಯಿಂದಾಗಿ ಕಾರಿನ ಹಿಂಬದಿ ನುಜ್ಜುಗುಜ್ಜಾಗಿದೆ.
ಕಾರಿನಲ್ಲಿ ಸಿಲುಕಿದವರನ್ನು ಸ್ಥಳೀಯರು ಹೊರತೆಗೆದಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)
ವಾಣಿಜ್ಯ ಬಳಕೆಯ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ಪುನಃ ಇಳಿಕೆ: ಎಲ್ಲೆಲ್ಲಿ ಎಷ್ಟೆಷ್ಟು? ಇಲ್ಲಿದೆ ಮಾಹಿತಿ

ಸರ್ಕಾರದ ಸವಲತ್ತಿಗಾಗಿ ಮದ್ವೆಯಾಗಿ ಕಿರುಕುಳ: ಜಾತಿನಿಂದನೆಯಿಂದ ಬೇಸತ್ತು ತುಮಕೂರಿನ ಗೃಹಿಣಿ ಆತ್ಮಹತ್ಯೆ

ಸುಮಲತಾ ಎಫ್​ಬಿ ಪೋಸ್ಟ್​ಗೆ ನೆಟ್ಟಿಗರ ತೀವ್ರ ಆಕ್ರೋಶ: ಕೊನೆಗೂ ಎಚ್ಚೆತ್ತುಕೊಂಡು ಸಭೆ ಮಾಡಲಿದ್ದಾರೆ ಸಂಸದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
