ಬೆಂಗಳೂರು:ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತ ಸಂಸದ ರಾಹುಲ್​ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ, ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ರಾಹುಲ್​ ಗಾಂಧಿ ಪರ ಬ್ಯಾಟಿಂಗ್​ ಬೀಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಅವರು, ರಾಹುಲ್​ ಗಾಂಧಿಯವರ ವಿರುದ್ಧ ವಿನಾಕಾರಣ ಸುಳ್ಳು ಆಪಾದನೆ ಹೊರಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಾನು ರಾಹುಲ್​ ಗಾಂಧಿಯವರ ಜತೆ ಅತ್ಯಂತ ಸಮೀಪದಿಂದ ಕೆಲಸ ಮಾಡಿದ್ದೇನೆ. ಅವರನ್ನು ನಾನು ಅತಿ ಹತ್ತಿರದಿಂದ ನೋಡಿದಂತೆ ಅವರು ಎಂದಿಗೂ ಭ್ರಷ್ಟರು ಎಂದು ಎನಿಸಲಿಲ್ಲ. ಅವರು ಭ್ರಷ್ಟರೂ ಅಲ್ಲ, ದುರಾಸೆಯ ವ್ಯಕ್ತಿಯೂ ಅಲ್ಲ. ಅವರನ್ನು ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಈ ರೀತಿ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದಿದ್ದಾರೆ.
ರಾಹುಲ್​ ಗಾಂಧಿಯವರ ಹೆಸರಿಗೆ ಕಳಂಕ ತರಲು ಈ ರೀತಿ ಮಾಡಲಾಗುತ್ತಿದೆ. ವಿನಾಕಾರಣ ಅವರನ್ನು ಈ ಪ್ರಕರಣದಲ್ಲಿ ಎಳೆಯಲಾಗುತ್ತಿದೆ ಎಂದು ಟ್ವೀಟ್​ ಮೂಲಕ ನಟಿ ಕಿಡಿ ಕಾರಿದ್ದಾರೆ.
ನ್ಯಾಷನಲ್​ ಹೆರಾಲ್ಡ್​ ಹಾಗೂ ರಾಹುಲ್​ ಗಾಂಧಿ ವಿರುದ್ಧ ಆರೋಪಿಸಿ ಪ್ರಕಟಗೊಂಡಿರುವ ಕೆಲವು ಸುದ್ದಿಗಳನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿರುವ ನಟಿ, ಇವೆಲ್ಲಾ ಶುದ್ಧ ಸುಳ್ಳು ಎಂದಿದ್ದಾರೆ.
ಆದರೆ ಈ ಟ್ವೀಟ್​ಗೆ ಅನೇಕ ಮಂದಿ ಕಮೆಂಟ್​ ಹಾಕಿದ್ದು, ಕಾನೂನನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಿ. ರಾಹುಲ್​ ಗಾಂಧಿ ಹಾಗೂ ಅವರ ಕುಟುಂಬ ಈ ಪ್ರಕರಣದಲ್ಲಿ ಮಾಡಿರುವ ಅಕ್ರಮಗಳು ಎಷ್ಟು ಎಂಬುದು ತಿಳಿದುಬರುತ್ತದೆ. ಭಾವನಾತ್ಮಕ ಸಂಬಂಧ ಒಂದು ಕಡೆ ಇರಲಿ, ನಿಜವಾಗಿ ಆಗಿರುವುದೇನು ಎಂಬುದನ್ನು ಸರಿಯಾಗಿ ತಿಳಿದುಕೊಂಡು ನಂತರ ಅವರ ಪರವಾಗಿ ಹೇಳಿ ಎಂದಿದ್ದಾರೆ. ಈ ಪ್ರಕರಣದಲ್ಲಿ ಹೇಗೆಲ್ಲಾ ಮೋಸ ಆಗಿದೆ ಎನ್ನುವುದನ್ನು ಚಾರ್ಟ್​ ಮೂಲಕ ತೋರಿಸಿಕೊಟ್ಟಿದ್ದು, ಇದಕ್ಕೆ ಇದುವರೆಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
Worked closely enough to confidently say@RahulGandhiis NOT corrupt. He’s not greedy, grasping or acquisitive. The allegations & tactics are to discredit/disrepute him-Here are the facts on the#NationalHeraldCasepic.twitter.com/guBQRhbGme— Ramya/Divya Spandana (@divyaspandana)June 16, 2022
Worked closely enough to confidently say@RahulGandhiis NOT corrupt. He’s not greedy, grasping or acquisitive. The allegations & tactics are to discredit/disrepute him-Here are the facts on the#NationalHeraldCasepic.twitter.com/guBQRhbGme
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
