ಗದಗ: ಪಿಎಸ್​ಐ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಪರೀಕ್ಷೆಯಲ್ಲಿ ನಡೆದ ಭಾರಿ ಅಕ್ರಮದ ಕುರಿತು ಇನ್ನೂ ವಿಚಾರಣೆ ನಡೆಯುತ್ತಲೇ ಇದೆ. ಅಗೆದಷ್ಟು ಬಗೆದಷ್ಟು ಈ ಹಗರಣದ ಹುಳುಕುಗಳು ಹೊರಬರುತ್ತಲೇ ಇರುವ ನಡುವೆಯೇ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ನಡೆದಿದ್ದ ಪರೀಕ್ಷೆಯಲ್ಲಿ ಭಾರಿ ಅಕ್ರಮದ ಘಾಟು ಬೀಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ಗದಗದಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ತಿಳಿದುಬಂದಿದೆ. ಗದಗನಲ್ಲಿಯೇ ಪರೀಕ್ಷಾ ಪತ್ರಿಕೆ ಲೀಕ್ ಆಗಿರುವುದು ಇದೀಗ ಬೆಳಕಿಗೆ ಬಂದಿದೆ. ಗದಗನ ಮುನ್ಸಿಪಲ್ ಕಾಲೇಜ್​ನಲ್ಲಿ ಪರೀಕ್ಷೆ ನಡೆದಿತ್ತು. ಇಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.
ಈ ಅಕ್ರಮದ ಹಿಂದೆ ತಂದೆ-ಮಗನ ಕರಾಮತ್ತು ಇರುವುದು ತಿಳಿದುಬಂದಿದೆ. ತಂದೆ ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಹಾಗೂ ಮಗ ಸಮೀತಕುಮಾರ್ ಕೈ ಚಳಕ ಇದೇ ಎನ್ನಲಾಗುತ್ತಿದೆ. ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟಿದ್ದ. ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದ. ನಂತರ ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿರುವ ಶಂಕೆ ವ್ಯಕ್ತವಾಗಿದೆ.
ಮೊಬೈಲ್​ಗಾಗಿ ಬೆಳಗಾವಿ ಸೈಬರ್ ಕ್ರೈಮ್​ನ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತಂದೆ-ಮಗನ ಬಂಧನವಾಗಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಜತೆಗೆ ಕಾಲೇಜಿನ ಪ್ರಾಚಾರ್ಯ ಕುಲಕರ್ಣಿ ಅವರನ್ನು ಕೂಡ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಪ್ರಾಚಾರ್ಯರು ಕಣ್ಣೀರಿಟ್ಟಿದ್ದಾರೆ. ರಾತ್ರೋರಾತ್ರಿ ಬೆಳಗಾವಿಗೆ ಸೈಬರ್ ಕ್ರೈಮ್ ಪೊಲೀಸರು ಶಿಫ್ಟ್​ ಆಗಿದ್ದು, ಗದಗ ನಗರದ ಮುನ್ಸಿಪಲ್ ಕಾಲೇಜ್ ನಲ್ಲಿ ವಿಚಾರಣೆ ಮುಗಿಸಿ ವಾಪಸಾಗಿದ್ದಾರೆ.
ಈ ಪರೀಕ್ಷೆಯು ಇದೇ ಆಗಸ್ಟ್ 7ರ ಭಾನುವಾರದಂದು ನಡೆದಿತ್ತು. ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್​ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಶಂಕೆ ವ್ಯಕ್ತವಾಗಿದೆ. ಪ್ರಶ್ನೆ ಪತ್ರಿಕೆ ಲೀಕ್​ ಆಗಿರೋ ಜಾಡು ಹಿಡಿದುಕೊಂಡು ಬಂದಿರುವ ಬೆಳಗಾವಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಹನಿಟ್ರ್ಯಾಪ್ ಸುಳಿಯಲ್ಲಿ ಮಂಡ್ಯದ ಬಿಜೆಪಿ ಮುಖಂಡ? ಡ್ರಾಪ್​ ನಿಡೋ ನೆಪದಲ್ಲಿ ಲಾಡ್ಜ್​ಗೆ ಕರೆದೊಯ್ದು ವಿಡಿಯೋ!
ಜೈಪುರದ ಕ್ಯಾಸಿನೋ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು! 84 ಮಂದಿ ಅರೆಸ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
