ಚಿಕ್ಕೋಡಿ:ಕೇಂದ್ರ ಸರ್ಕಾರದ ಅಗ್ನಿಪಥ್​ ಯೋಜನೆಯನ್ನು ವಿರೋಧಿಸಿ ಇದಾಗಲೇ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ, ರೈಲಿಗೆ ಬೆಂಕಿಯನ್ನೂ ಹಚ್ಚಿದ್ದರೆ, ಕೆಲವರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಚಿಕ್ಕೋಡಿಯಲ್ಲಿಯೂ ಅಗ್ನಿಪಥ್​ ವಿರೋಧಿಸಿ ಕೆಲವು ಯುವಕರ ಗುಂಪು ಪ್ರತಿಭಟನೆಗೆ ಮುಂದಾಗಿತ್ತು. ಬೆಳಗಾವಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಈ ಯುವಕರು ಹೊರಟಿದ್ದರು. ಆದರೆ ಪ್ರತಿಭಟನೆಯಿಂದ ಏನೂ ಪ್ರಯೋಜನವಿಲ್ಲ, ಸುಮ್ಮನೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಚಿಕ್ಕೋಡಿ ಪೊಲೀಸರು ಯುವಕರ ಮನವೊಲಿಸಿ ವಾಪಸ್​ ಕಳಿಸಿದ್ದು, ಭಾರಿ ಶ್ಲಾಘನೆ ವ್ಯಕ್ತವಾಗಿದೆ.
ಅಗ್ನಿಪಥ್​ ಯೋಜನೆಯಡಿ ಯುವಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಇದರಲ್ಲಿ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಇದಾಗಲೇ ಹೇಳಿದೆ. ಈ ಹಿನ್ನೆಲೆಯಲ್ಲಿ ಸುಖಾಸುಮ್ಮನೆ ಭವಿಷ್ಯ ಹಾಳುಮಾಡಿಕೊಳ್ಳಬೇಡಿ ಎಂದು ಪೊಲೀಸರು ಮನವೊಲಿಸಿದ್ದಾರೆ.
ಭವಿಷ್ಯ ಹಾಳ್ ಮಾಡ್ಕೊಬೇಡ್ರಪ್ಪ ಮನೆಗ್ ಹೋಗಿ ಅಂತ ಹೇಳಿದ್ದೂ ಅಲ್ಲದೇ, ಪ್ರತಿಭಟನೆಗೆ ಬಂದಿರುವ ಯುವಕರಿಗೆ ಪೊಲೀಸರೇ ಊಟದ ವ್ಯವಸ್ಥೆ ಮಾಡಿ ಊಟ ಬಡಿಸಿ ಮನೆಗೆ ವಾಪಸ್​ ಕಳಿಸಿದ್ದಾರೆ. ಚಿಕ್ಕೋಡಿ ಬಸ್ ನಿಲ್ದಾಣದಲ್ಲಿಯೇ ಯುವಕರಿಗೆ 20ಕ್ಕೂ ಅಧಿಕ ಪೊಲೀಸರು ತಿಂಡಿ ವ್ಯವಸ್ಥೆ ಮಾಡಿದ್ದರು.
ಚಿಕ್ಕೋಡಿ ಪೊಲೀಸರ ಕೆಲಸಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
‘ಒಂದೂವರೆ ಲಕ್ಷ ಯುವಕರ ನೇಮಕ, ಒಂದು ಕೋಟಿ ರೂ. ಪರಿಹಾರ: ಗಲಭೆಕೋರರಿಗಿಲ್ಲ ಅವಕಾಶ!

ಅಗ್ನಿಪಥ್​ v/s ಕಾಂಗ್ರೆಸ್​- ಎಲ್ಲಿದ್ದೆ ಇಲ್ಲೀ ತನಕ…ಈಗ್ಯಾಕೆ ಬಂದ್ಯಯ್ಯ: ವಿಂಗ್​ ಕಮಾಂಡರ್​ ಹೇಳಿದ್ದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 14 =
Remember me
