ನವದೆಹಲಿ:ಯುವಜನರನ್ನು ಸೈನ್ಯಕ್ಕೆ ಸೇರಿಸಿಕೊಳ್ಳುವ ಕೇಂದ್ರದ ಮಹಾತ್ವಾಕಾಂಕ್ಷಿ ಯೋಜನೆ ವಿರುದ್ಧ ದೇಶದ ಕೆಲವೆಡೆ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದೆ. ಈ ಯೋಜನೆ ಕುರಿತಾಗಿ ಕೇಂದ್ರ ಸರ್ಕಾರ ಎಷ್ಟೇ ಸ್ಪಷ್ಟನೆ ಕೊಡುತ್ತಿದ್ದರೂ ಯೋಜನೆ ಕುರಿತಾಗಿ ಕೆಲವು ಸುಳ್ಳು ಮಾಹಿತಿಗಳನ್ನು ಒಂದು ವರ್ಗ ಪ್ರಚಾರ ಮಾಡುತ್ತಿದೆ. ಆದ್ದರಿಂದ ಯೋಜನೆಯ ಕುರಿತು ಸರಿಯಾಗಿ ತಿಳಿದುಕೊಳ್ಳದೇ ಎಷ್ಟೋ ಮಂದಿ ಹಿಂಸಾಚಾರ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಿದ್ದ ಆರೋಪದ ಮೇಲೆ ಸದ್ಯ 35 ವಾಟ್ಸ್​ಆ್ಯಪ್​ ಗ್ರೂಪ್​ಗಳನ್ನು ಬಂದ್​ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಅರೆಸ್ಟ್​ ಮಾಡಲಾಗಿದೆ. ವಾಟ್ಸ್​ಆ್ಯಪ್​ ಬ್ಯಾನ್​ಗಳ ಸಂಖ್ಯೆ ಹಾಗೂ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಕಳೆದ ಕೆಲವು ದಿನಗಳಿಂದ ಮುಖ್ಯವಾಗಿ ಉತ್ತರ ಭಾರತದ ಉತ್ತರ ಪ್ರದೇಶ, ಬಿಹಾರ, ದೆಹಲಿ, ರಾಜಸ್ಥಾನ ಮತ್ತು ಹರಿಯಾಣ ರಾಜ್ಯಗಳಲ್ಲಿ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ರೈಲುಗಳು ಮತ್ತು ನಿಲ್ದಾಣಗಳನ್ನು ಸುಟ್ಟುಹಾಕಲಾಯಿಗಿದೆ, ರಸ್ತೆಗಳನ್ನು ನಿರ್ಬಂಧಿಸಲಾಗಿದೆ.ಈ ಹಿಂಸಾಚಾರಕ್ಕೆ ವಾಟ್ಸ್​ಆ್ಯಪ್​ಗಳ ಮೂಲಕ ಬರುತ್ತಿರುವ ಸಂದೇಶಗಳೂ ಕಾರಣ ಎನ್ನುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಬಿಹಾರದಲ್ಲಿ ಇದಾಗಲೇ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡಿವೆ. ಸಾರ್ವಜನಿಕರನ್ನು ಪ್ರಚೋದಿಸುವ ಮತ್ತು ಜೀವ ಮತ್ತು ಆಸ್ತಿಗೆ ಹಾನಿ ಮಾಡುವ ಉದ್ದೇಶದಿಂದ ವದಂತಿಗಳನ್ನು ಹರಡಲು ‘ಆಕ್ಷೇಪಾರ್ಹ ವಿಷಯವನ್ನು’ ಪ್ರಸಾರ ಮಾಡಲು ಇಂಟರ್ನೆಟ್ ಅನ್ನು ಬಳಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು.’ಪಾಟ್ನಾದಲ್ಲಿ 190 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ, 11 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ತೆಲಂಗಾಣ ಪೊಲೀಸರು ಕೂಡ ಈ ಹಿಂದೆ ಪಲ್ನಾಡು ಜಿಲ್ಲೆಯ ನರಸರಾವ್‌ಪೇಟೆಯಲ್ಲಿ ಯುವಕರನ್ನು ಅಗ್ನಿಪಥ ಯೋಜನೆಯನ್ನು ವಿರೋಧಿಸಲು ಪ್ರಚೋದಿಸಿದ ಆರೋಪದ ಮೇಲೆ ಕೋಚಿಂಗ್ ಇನ್‌ಸ್ಟಿಟ್ಯೂಟ್ ಮಾಲೀಕನನ್ನು ಬಂಧಿಸಿದ್ದರು ಎಂದು ವರದಿಗಳು ತಿಳಿಸಿವೆ.
‘ಒಂದೂವರೆ ಲಕ್ಷ ಯುವಕರ ನೇಮಕ, ಒಂದು ಕೋಟಿ ರೂ. ಪರಿಹಾರ: ಗಲಭೆಕೋರರಿಗಿಲ್ಲ ಅವಕಾಶ!

ಅಗ್ನಿಪಥ್​ v/s ಕಾಂಗ್ರೆಸ್​- ಎಲ್ಲಿದ್ದೆ ಇಲ್ಲೀ ತನಕ…ಈಗ್ಯಾಕೆ ಬಂದ್ಯಯ್ಯ: ವಿಂಗ್​ ಕಮಾಂಡರ್​ ಹೇಳಿದ್ದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
