ವಿಜಯಪುರ:ಮಹಿಳಾ ವಿವಿಯ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದಲ್ಲಿರುವ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ನಡೆದಿದೆ.
ಕಲಬುರ್ಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.‌ ಈಕೆಗೆ ಇತ್ತಿಚೆಗಷ್ಟೇ ಮದುವೆಯ ನಿಶ್ಚಿತಾರ್ಥವಾಗಿತ್ತು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಮಂಚದ ಕೆಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪಕ್ಕದಲ್ಲಿಯೇ ಖುರ್ಚಿ ಇದೆ. ಆದರೆ ಮಂಚಕ್ಕೆ ದುಪ್ಪಟ್ಟಾ ಸಿಲುಕಿಕೊಂಡಿದ್ದು, ಆತ್ಮಹತ್ಯೆ ಹೇಗೆ ಮಾಡಿಕೊಂಡಿದ್ದಾಳೆ ಎಂಬ ಬಗ್ಗೆ ಇನ್ನಷ್ಟೇ ಪತ್ತೆಯಾಗಬೇಕಿದೆ.
ಇದನ್ನೂ ಓದಿ:ಭಾರಿ ಮಳೆ ಹಿನ್ನೆಲೆ: ಕೆಲವೆಡೆ ನಾಳೆಯ ಪದವಿ, ಪಿಜಿ ಪರೀಕ್ಷೆ ಮುಂದೂಡಿಕೆ
ಎಂ.ಕಾಂ. ಅಂತಿಮ ವರ್ಷದ ಕೊನೆಯ ಪರೀಕ್ಷೆ ನಾಳೆ ಬರೆಯಬೇಕಿದ್ದ ಐಶ್ವರ್ಯ ನೇಣು ಹಾಕಿಕೊಂಡಿದಕ್ಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನೆಲದ ಮಟ್ಟಕ್ಕಿಂತ ಸ್ವಲ್ಪವೇ ಮೇಲಿದ್ದ ಕಾಟ್​ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂಬ ಬಗ್ಗೆ ನಿಗೂಢವಾಗಿದೆ.
ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊನೆಗೂ ಅಂಗೀಕೃತಗೊಂಡಿತು ಕೃಷಿ ಮಸೂದೆ: ರಾಷ್ಟ್ರಪತಿ ಅಂಕಿತವೊಂದೇ ಬಾಕಿ

ಐಸಿಸ್​ ಉಗ್ರರಾಗಲು ಹೊರಟ 500 ಯುವಕರ ಮನ ಪರಿವರ್ತನೆ: ಪೊಲೀಸರ ಸಾಹಸಗಾಥೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − four =
Remember me
