ಬೆಂಗಳೂರು:ಕರೊನಾದಿಂದಾಗಿ ಹಲವು ಕಾರ್ಮಿಕರ ಬದುಕು ಬೀದಿಗೆ ಬಂದಿದೆ. ಎಷ್ಟೋ ಮಂದಿಗೆ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಉಂಟಾಗಿದೆ. ಇದೇ ಕಾರಣದಿಂದ ಸರ್ಕಾರದ ವತಿಯಿಂದ ರಾಜ್ಯದ ಹಲವು ಕಡೆಗಳಲ್ಲಿ ಇದಾಗಲೇ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದೆ.
ಇದರ ಬೆನ್ನಲ್ಲೇ ಇದೀಗ ಅಪ್ಪಾಜಿ ಕ್ಯಾಂಟೀನ್‌ ಬೆಂಗಳೂರಿಗರಿಗೆ ಸೇವೆ ಒದಗಿಸಲು ಸನ್ನದ್ಧವಾಗಿದೆ. ಸಂಚಾರಿ ಅಪ್ಪಾಜಿ ಮೊಬೈಲ್ ಕ್ಯಾಂಟೀನ್ ಸೇವೆ ಸೋಮವಾರ (ಮೇ 17) ಆರಂಭವಾಗಲಿದೆ.
ಕರೊನಾ ಸಂಕಷ್ಟದಲ್ಲಿ ಅನೇಕರು ಹಸಿವಿನಿಂದ ತತ್ತರಿಸುತ್ತಿರುವುದನ್ನು ತಪ್ಪಿಸುವ ಉದ್ದೇಶದಿಂದ ಜೆಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯರಾದ ಡಾ. ಟಿ.ಎ. ಶರವಣ ಹಾಗೂ ಜೆಡಿಎಸ್ ನ ಪ್ರಮುಖ ಮುಖಂಡರುಗಳು ಸೋಮವಾರದಿಂದ ನಮ್ಮ ದೇವೇಗೌಡ ಸಂಚಾರಿ ಅಪ್ಪಾಜಿ ಕ್ಯಾಂಟಿನನ್ನು ಪ್ರಾರಂಭಿಸಲಿದ್ದಾರೆ ಎಂದು ಜೆಡಿಎಸ್‌ ಮುಖಂಡರು ಹೇಳಿದ್ದಾರೆ.
ಈ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಊಟದ ಪ್ಯಾಕೆಟ್‌ಗಳನ್ನು ವಿತರಿಸಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆಯ ಮುಂಭಾಗದ ಗೇಟ್, ಕೆ ಆರ್ ಮಾರ್ಕೆಟ್ ಮೆಟ್ರೋ ಸ್ಟೇಷನ್ ಹತ್ತಿರ ಈ ಸೇವೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಇದರ ಉದ್ಘಾಟನೆ ನಡೆಯಲಿದೆ. ಮಾಹಿತಿಗಾಗಿ ಸಂಪರ್ಕಿಸಿ: ಡಾ.ಟಿ.ಎ. ಶರವಣ- 9844006560.
ಲಾಕ್‌ಡೌನ್‌ ವಿಶೇಷ: ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದಿಂದ ಫ್ರೀ ಉಪಾಹಾರ, ಊಟ

ಸಿವಿಲ್‌ ಇಂಜಿನಿಯರಿಂಗ್‌ ಪದವೀಧರರಾ? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

ನೀನು ಡುಮ್ಮಿ, ಕುಳ್ಳಿ, ಶೇಪ್‌ಲೆಸ್‌… ಎನ್ನೋ ಇವ್ನ ಬುದ್ಧಿ ನೆಟ್ಟಗೆ ಮಾಡೋದ್ಹೇಗೆ ಮೇಡಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
