ಚಾಮರಾಜನಗರ:ಕರೊನಾ ಮಹಾಮಾರಿ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರ ತೋರುತ್ತಲೇ ಇದೆ. ಯಾರಿಗೆ, ಯಾವ ರೀತಿಯಲ್ಲಿ ಈ ಸೋಂಕು ಒಕ್ಕರಿಸುತ್ತಿದೆಯೋ ತಿಳಿಯುತ್ತಿಲ್ಲ.ಇದೀಗ ಚಾಮರಾಜನಗರದ ಜಿಲ್ಲಾ ಅಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ಜುಲೈ 26ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲುಮಾಡಲಾಗಿತ್ತು. ಆದರೆ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದ ಇವರು ಕಳೆದ 22 ವರ್ಷಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ31 ರಂದು ಇವರಿಗೆ ನಿವೃತ್ತಿಯಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಇದುವರೆಗೆ ಅಧಿಕಾರವನ್ನು ಹಸ್ತಾಂತರ ಮಾಡಿರಲಿಲ್ಲ. ಅಷ್ಟರೊಳಗೆ ಕರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್‌ಚಾರ್ಜ್‌: ಆರೋಗ್ಯ ಸ್ಥಿರ
ಡಾ.ರಾಚಯ್ಯ ಅವರಿಗೆ ಮಧುಮೇಹ ಹಾಗು ರಕ್ತದೊತ್ತಡ ಇತ್ತು ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಯುಷ್ ಇಲಾಖೆಯ ಇಬ್ಬರು ಸಿಬ್ಬಂದಿಗೆ ಸೋಂಕಿನ ಪರೀಕ್ಷೆ ಮಾಡಲಾಗಿದ್ದು ಇಬ್ಬರಿಗೂ ನೆಗೆಟಿವ್ ಬಂದಿದೆ ಎನ್ನಲಾಗಿದೆ.
ಕರೊನಾ ಕಾಲದಲ್ಲಿ ಕೃಷಿಕನ ಪಕ್ಷಿಪ್ರೇಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 8 =
Remember me
