ಬಾಗಲಕೋಟೆ:ಬಿಜೆಪಿ ಶಾಸಕನ ಸಹೋದರನ ಮೇಲೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಇವರೂ ಸೇರಿದಂತೆ ಒಟ್ಟು ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಅರುಣ ಲೋಕಾಪುರ, ಗುರು ಅನಗವಾಡಿ, ಪ್ರಶಾಂತ ಸೊನಕನಾಳ ಉಚ್ಛಾಟನೆಗೊಂಡ ಇತರೆ ಬಿಜೆಪಿ ಕಾರ್ಯಕರ್ತರು. ಇವರೆಲ್ಲರನ್ನೂ ಪಕ್ಷದಿಂದ ಉಚ್ಛಾಟಿಸಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ ಆದೇಶ ಹೊರಡಿಸಿದ್ದಾರೆ.
ಮಲ್ಲಿಕಾರ್ಜುನ ಚರಂತಿಮಠ ಮುಂದಿನ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಇತ್ತೀಚಿಗೆ ಪಕ್ಷದಲ್ಲಿ ಅವರದ್ದೇ ಗುಂಪು ಸಕ್ರಿಯವಾಗಿತ್ತು. ಇದು ಶಾಸಕ ವೀರಣ್ಣ ಚರಂತಿಮಠ ಅವರಿಗೆ ಸಾಕಷ್ಟು ಇರುಸು ಮುರಸು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಮಲ್ಲಿಕಾರ್ಜುನ ಚರಂತಿಮಠ ಉಚ್ಛಾಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಸಹೋದರರ ಸವಾಲ್ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ(ದಿಗ್ವಿಜಯ ನ್ಯೂಸ್​)
ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ಕಲಬುರಗಿ ಆರೋಪಿ ಸಾವು

ಇದು ಮದುವೆಯ ಗೋಲ್​ಮಾಲ್​! ಇಲ್ಲಿರೋದೇ ಒಂದೂವರೆ ಸಾವಿರ ಜನ, ಮದ್ವೆಯಾದವ್ರು 1470 ಜನ!

ವಿದ್ಯುತ್​ ಬಿಲ್​ ಕಟ್ಟಿಲ್ಲವೆಂದು ಎಸ್​ಎಂಎಸ್​, ಕರೆ ಬಂದರೆ ಎಚ್ಚರ: ದುಡ್ಡು ಕಳೆದುಕೊಳ್ಳಬೇಕಾದೀತು ಜೋಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
