ಬಳ್ಳಾರಿ:ಪತ್ನಿಯ ಜೀವ ಉಳಿಸಲು ಹೋಗಿ ಬಳ್ಳಾರಿಯ ಕೌಲ್‌ ಬಜಾರ್‌ನ ಬಂಡಿಹಟ್ಟಿಯ ಮನೆಯ ನಿವಾಸಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಪಾಪತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಪತ್ನಿ ದ್ಯಾವಮ್ಮ ಅವರೂ ಮೃತಪಟ್ಟಿದ್ದಾರೆ.
ಮನೆಯ ಮೇಲೆ ನಿಂತಿದ್ದ ಮಳೆ ನೀರನ್ನು ಕೆಳಕ್ಕೆ ಚೆಲ್ಲಲು ದ್ಯಾವಮ್ಮನವರು ಹೋಗಿದ್ದರು. ಈ ಸಂದರ್ಭದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾರೆ, ಅವರಿಗೆ ಶಾಕ್​ ಹೊಡೆದಿದೆ. ಈ ವೇಳೆ ಪತ್ನಿಯನ್ನು ರಕ್ಷಿಸಲು ಹೋಗಿದ್ದರು ಪಂಪಾಪತಿ. ಈ ವೇಳೆ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.
ಪಂಪಾಪತಿ ಅವರು ಬಯಲಾಟ ಕಲಾವಿದರಾಗಿದ್ದರು, ಎರಡು ಸಾವಿರಕ್ಕೂ ಅಧಿಕ ಬಯಲಾಟ ಪ್ರದರ್ಶನಗಳನ್ನು ಇವರು ನೀಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಇವರಿಗೆ 2018ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ಬಯಲಾಟ ಕಲಾವಿದರಾಗಿ ಹಲವು ದಶಕಗಳ ಕಾಲ ಸಾರಥಿ ಪಾತ್ರವನ್ನು ಅಭಿನಯಿಸಿದ್ದರಿಂದ ಇವರಿಗೆ ಸಾರಥಿ ಪಂಪಾಪತಿ ಎಂದೇ ಜನರು ಗುರುತಿಸುತ್ತಿದ್ದರು.
ಪಂಪಾಪತಿ ಅವರಿಗೆ 68 ಹಾಗೂ ದ್ಯಾವಮ್ಮಾ ಅವರಿಗೆ 65 ವರ್ಷ ವಯಸ್ಸಾಗಿತ್ತು. ಇವರಿಗೆ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಘಟನೆ ಸಂಬಂಧಿಸಿ ಕೌಲ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧಿಸಿ ಅಲ್ಲಿನ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
VIDEO: ಪಾಕ್​ನಲ್ಲಿ ಮಳೆಯ ರುದ್ರ ನರ್ತನ: ಸಾವಿನ ಸಂಖ್ಯೆ 1033ಕ್ಕೆ ಏರಿಕೆ- ಪ್ರವಾಹದ ಭೀಕರ ವಿಡಿಯೋಗಳು ಇಲ್ಲಿವೆ…
ಅವಳಿ ಕಟ್ಟಡ ನೆಲಸಮಗೊಳಿಸ್ತಿರೋ ಬ್ಲಾಸ್ಟರ್​ ಚೇತನ್​ರ ಕನಸಿಂದು ನನಸಾಗ್ತಿದೆ! ಅವರ ಮಾತಲ್ಲೇ ಕೇಳಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
