ಬೆಂಗಳೂರು:ಪತ್ನಿಯ ಜತೆ ಬ್ಯಾಂಕ್‌ಗೆ ಬಂದಿದ್ದ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ಹಾಡಹಗಲೇ ನಡೆದಿದೆ.
ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ರೌಡಿ ಜೋಸೆಫ್​ ಅಲಿಯಾಸ್ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ‌ಮಾಡಲಾಗಿದೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬೈಕ್‌ಗಳಲ್ಲಿ ಬಂದಿದ್ದ 8 ಮಂದಿ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿರುವುದಾಗಿ ವರದಿಯಾಗಿದೆ.
ಬೈಕ್​ನಲ್ಲಿ ಪತ್ನಿಯ ಜತೆ ಬಬ್ಲಿ ತೆರಳುತ್ತಿದ್ದ. ಈ ವೇಳೆ ಗ್ಯಾಂಗ್​ ಆತನ ಮೇಲೆ ದಾಳಿ ಮಾಡಿದೆ. ತಪ್ಪಿಸಿಕೊಳ್ಳುವ ಭರದಲ್ಲಿ ಬ್ಯಾಂಕ್​ ಒಳಗೆ ಆತ ನುಗ್ಗಿದ್ದಾನೆ. ಅಲ್ಲಿಯೂ ಬಿಡೆ ಗ್ಯಾಂಗ್​ ಬ್ಯಾಂಕ್​ ಒಳಗೇ ನುಗ್ಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆಡುಗೋಡಿ ಠಾಣೆಯ ರೌಡಿಶೀಟರ್​ನಲ್ಲಿ ಬಬ್ಲಿಯ ಹೆಸರು ಇತ್ತು. ಸ್ಥಳೀಯ ರಾಜೇಂದ್ರ ಕೊಳಚೆ ಪ್ರದೇಶದ ನಿವಾಸಿಯಾಗಿರುವ ಬಬ್ಲಿ ಅಕ್ರಮವಾಗಿ ಮತಾಂತರದಲ್ಲಿ ತೊಡಗಿದ್ದ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬ್ಯಾಂಕ್​ಗೆ ಧಾವಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಹಾಗೂ ಆಗ್ನೇಯ ಡಿಸಿಪಿ ಜೋಶಿ ಶ್ರೀನಾಥ್‌ ಮಹದೇವ್‌ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಬಬ್ಲಿ ಕೊರಮಂಗಲದ ರಾಜೇಂದ್ರ ಮತ್ತು ವಿವೇಕ ನಗರದ ಜಾರ್ಜ್ ಎಂಬಾತನ ಜೊತೆ ದ್ವೇಷ ಹೊಂದಿದ್ದ ಎನ್ನಲಾಗಿದೆ. ಬಬ್ಲಿ, 2011 ರವರೆಗೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಳಿಕ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಇದು ‘ಮುತ್ತಿನ’ ಕಥೆ: ಸಾರ್ವಜನಿಕ ಸ್ಥಳದಲ್ಲೇ ಕಿಸ್​ ಮಾಡಿ ವೈರಲ್​ ಆದ್ಲು ಶ್ರುತಿ ಹಾಸನ್​

ರಾಯಭಾರಿ ಮಗಳ ಕಿಡ್​ನ್ಯಾಪ್: ಜಾಗತಿಕವಾಗಿ ಪಾಕಿಸ್ತಾನ ತಲೆ ಎತ್ತದಂತೆ ಮಾಡಿದ ಅಫ್ಘಾನಿಸ್ತಾನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 3 =
Remember me
