ನವದೆಹಲಿ:ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೀಗ ಸುಪ್ರೀಂಕೋರ್ಟ್​ನ ಮೂವರು ನ್ಯಾಯಮೂರ್ತಿಗಳು ಇರುವ ತ್ರಿಸದಸ್ಯಪೀಠ ನಡೆಸಲಿದೆ. ಇದಾಗಲೇ ವಿಚಾರಣೆ ಆರಂಭವಾಗಿದೆ.
ಕೆಲವೇ ನಿಮಿಷಗಳ ಮೊದಲು ಈ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ಪೀಠದ ಮುಂದೆ ಬಂದಿತ್ತು. ಹೈಕೋರ್ಟ್​ ವಿಭಾಗೀಯ ಪೀಠದ ಇಬ್ಬರು ನ್ಯಾಯಮೂರ್ತಿಗಳಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿತ್ತು. ಓರ್ವ ನ್ಯಾಯಮೂರ್ತಿ ಹೈಕೋರ್ಟ್​ ತೀರ್ಪಿನ ಪರವಾಗಿ ಇದ್ದರೆ ಇನ್ನೋರ್ವ ನ್ಯಾಯಮೂರ್ತಿ ಹೈಕೋರ್ಟ್​ ತೀರ್ಪಿನ ವಿರುದ್ಧವಾಗಿ ತೀರ್ಪು ನೀಡಿದರು.
ಈ ಹಿನ್ನೆಲೆಯಲ್ಲಿ ಇದನ್ನು ಮೂವರು ನ್ಯಾಯಮೂರ್ತಿಗಳು ಇರುವ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು. ಒಂದೇ ಗಂಟೆಯ ಒಳಗೆ ಮುಖ್ಯನ್ಯಾಯಮೂರ್ತಿಗಳು ತ್ರಿಸದಸ್ಯರ ಪೀಠವನ್ನು ರಚನೆ ಮಾಡಿದ್ದಾರೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎ.ಎಸ್​.ಓಕಾ, ಎಂ.ಎಂ.ಸುಂದರೇಶ್​ ಅವರು ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಮೂವರು ನ್ಯಾಯಮೂರ್ತಿಗಳಲ್ಲಿ ಮೂವರು ಅಥವಾ ಇಬ್ಬರು ಯಾವ ನಿಲುವು ತಾಳುತ್ತಾರೆಯೋ ಅದೇ ಅಂತಿಮವಾಗಲಿದೆ.
ಹೈಕೋರ್ಟ್​ ಆದೇಶ ಪ್ರಶ್ನಿಸಿ ಕರ್ನಾಟಕ ವಕ್ಫ್‌ ಬೋರ್ಡ್‌ ಸಲ್ಲಿಸಿರುವ ಮೇಲ್ಮನವಿ ಇದಾಗಿದೆ.
ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರಲಿಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು. ಆದರೆ, ಮರುದಿನವೇ ಹೈಕೋರ್ಟ್‌ ವಿಭಾಗೀಯ ಪೀಠವು ಯಾರು ಯಾವ ಆಚರಣೆಯನ್ನಾದರೂ ಮಾಡಬಹುದು ಎಂದು ತೀರ್ಪು ನೀಡಿತು. ಇದನ್ನು ಈಗ ಪ್ರಶ್ನಿಸಲಾಗಿದೆ. (ಏಜೆನ್ಸೀಸ್​)
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಹೈಕೋರ್ಟ್​ ಆದೇಶಕ್ಕಿಲ್ಲ ಸುಪ್ರೀಂ ತಡೆ- ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − six =
Remember me
