ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವವಿರುವ ದುರುದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಜಿ ಸಚಿವ ಎಚ್ ವೈ ಮೇಟಿ ಪ್ರಕರಣವನ್ನೇ ಮುಚ್ಚಿ ಹಾಕಿರುವ ಕಾಂಗ್ರೆಸ್ ಮುಖಂಡರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಈ ವಿಷಯ ತಿಳಿಸಿದರು.
‌ಕಾಂಗ್ರೆಸ್ ಮುಖಂಡರು ಇಷ್ಟು ದಿನ ಬಿಟ್ಟು ಈಗಲೇ ಯಾಕೆ ಈ ವಿಷಯವನ್ನು ಕೈಗೆತ್ತಿಕೊಂಡರು? ಹೈಕೋರ್ಟಿನಲ್ಲಿ ದಾಖಲಾಗಿರುವ ಅರ್ಜಿ ಇದಕ್ಕೆ ಕಾರಣವೇ ಎಂಬ ಸಂಶಯವನ್ನು ಸಚಿವರು ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ಆಗುವ ಬೆಳವಣಿಗೆಗಳ ಕುರಿತು ತನಿಖಾಧಿಕಾರಿಗಳು ಹೈಕೋರ್ಟಿಗೆ ವರದಿ ಸಲ್ಲಿಸುತ್ತಾರೆ. ಹೀಗಾಗಿ ತನಿಖಾಧಿಕಾರಿಗಳ ಮೇಲೆ ಪ್ರಭಾವವಿರುವ ದುರುದ್ದೇಶದಿಂದ ಕಾಂಗ್ರೆಸ್ ಮುಖಂಡರು ಈಗ ಈ ಪ್ರಕರಣದಲ್ಲಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು.
ಈ ಹಿಂದೆ ಮಾಜಿ ಸಚಿವ ಎಚ್ ವೈ ಮೇಟಿ ಪ್ರಕರಣದಲ್ಲಿ ಏನಾಯ್ತು? ಸಂತ್ರಸ್ತ ಮಹಿಳೆ ದೂರು ನೀಡಿದರೂ ಮಾಜಿ ಸಚಿವರ ಹೆಸರನ್ನೇ ದೂರಿನಲ್ಲಿ ದಾಖಲಿಸಿ ಕೊಳ್ಳಲಿಲ್ಲ. ಮಾಜಿ ಸಚಿವರ ಹೆಸರಿಲ್ಲದೆ ಪ್ರಕರಣವನ್ನು ತನಿಖೆ ನಡೆಸಿ ಮುಚ್ಚಿ ಹಾಕಲಾಯಿತು. ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದರು. ಅಂಥವರಿಂದ ನಾವು ನೈತಿಕತೆಯ ಪಾಠ ಕಲಿಯಬೇಕಿಲ್ಲ ಎಂದು ಬಸವರಾಜ ಬೊಮ್ಮಾಯಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಜಾರಕಿಹೊಳಿ ಪ್ರಕರಣದಲ್ಲಿ ಪೊಲೀಸರು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದಾರೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ. ಯಾರೂ ಯಾರ ಮೇಲೆ ಪ್ರಭಾವವನ್ನು ಬೀರಿಲ್ಲ ಎಂದು ಅವರು ಹೇಳಿದರು.
ಕೂಲ್‌ಡ್ರಿಂಗ್ಸ್‌ ಬಾಟಲಿಯ ಮುಚ್ಚಳ ಜೇನ್ನೊಣ ತೆಗೆಯುವುದನ್ನು ಕಂಡಿದ್ದೀರಾ? ಇಲ್ಲಿದೆ ನೋಡಿ ಅಚ್ಚರಿ ವಿಡಿಯೋ

ಮಧ್ಯರಾತ್ರಿ ಧಗಧಗ ಹೊತ್ತಿ ಉರಿದ ಕಾರ್ಖಾನೆ- ಅಗ್ನಿ ಶಾಮಕ ದಳಕ್ಕೆ ಸಾಧ್ಯವಾಗದೇ ವಾಯುಪಡೆ ಕಾರ್ಯಾಚರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − nine =
Remember me
