ಬೆಂಗಳೂರು:ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣಾ ಪ್ರಕ್ರಿಯೆಯನ್ನು ಸೆ.22ರಿಂದ ಆರಂಭ ಮಾಡಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ್.ಫಣೀಂದ್ರ ಹೈಕೋರ್ಟ್​ಗೆ ಹೇಳಿದ್ದಾರೆ.
ಬಿಬಿಎಂಪಿಯ ಚುನಾವಣೆಯನ್ನು ಶೀಘ್ರದಲ್ಲಿ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಅದರ ನಿರ್ದೇಶನದಂತೆಯೇ ನಡೆದುಕೊಳ್ಳಲಾಗುವುದು. ಸೆ.22ರಿಂದ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದಿದ್ದಾರೆ. ಇದರ ಕುರಿತು ಅರ್ಜಿದಾರರಿಗೆ ಏನಾದರೂ ಆಕ್ಷೇಪಣೆಗಳಿದ್ದರೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಿ. ಸುಪ್ರೀಂ ಕೋರ್ಟ್ ನಿಂದಲೇ ಸ್ಪಷ್ಟನೆ ಪಡೆಯಲಿ ಎಂದಿದ್ದಾರೆ.
ಸರ್ಕಾರ ನಿನ್ನೆ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು, ವಾರ್ಡ್ ಪುನರ್ವಿಂಗಡಣೆಗೆ ತಡೆ ನೀಡಲು ಮನವಿ ಮಾಡಲಾಗಿದೆ. ಅರ್ಜಿದಾರರ ಪರ ವಕೀಲರು ವಾದಿಸುತ್ತಾ, ತಮಗೆ ಆಕ್ಷೇಪಣೆಗಳು ಇವೆ ಎಂದು ಹೇಳಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಆಯೋಗದ ಪರ ವಕೀಲರು ಮೇಲಿನಂತೆ ವಾದಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡರ್, ಸರ್ಕಾರ ಎಲ್ಲವನ್ನೂ ತರಾತುರಿಯಲ್ಲಿ ಮಾಡುತ್ತಿದೆ ಎಂದು ಅರ್ಜಿದಾರರು ಅಭಿಪ್ರಾಯ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದಲೇ ಸ್ಪಷ್ಟನೆ ಪಡೆಯುವುದು ಸೂಕ್ತ ಎಂದು ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಧ್ಯಂತರ ಆದೇಶ ನೀಡಲು ನಿರಾಕರಿಸಿದ ನ್ಯಾಯಮೂರ್ತಿಗಳು ಅರ್ಜಿಯ ವಿಚಾರಣೆಯನ್ನು ಆ.29 ಕ್ಕೆ ಮುಂದೂಡಿದರು.(ದಿಗ್ವಿಜಯ ನ್ಯೂಸ್​)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:19 − twelve =
Remember me
