ನವದೆಹಲಿ:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್​, ಇನ್ನು ಒಂದು ವಾರದ ಒಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಸೂಚಿಸಿದೆ. ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಕೋರ್ಟ್​ ಹೇಳಿದೆ.
ಈ ಆದೇಶದ ಅನ್ವಯ ಬಿಬಿಎಂಪಿಯು, ತನ್ನ ವ್ಯಾಪ್ತಿಯ ವಾರ್ಡ್ ಮೀಸಲಾತಿ ಪಟ್ಟಿಯನ್ನು ಇನ್ನು ಒಂದು ವಾರದ ಒಳಗೆ ಪ್ರಕಟಿಸಬೇಕಿದೆ. ಇದರ ವಿಚಾರಣೆಯನ್ನು ಕೋರ್ಟ್​, ಆಗಸ್ಟ್ 26ಕ್ಕೆ ಮುಂದೂಡಿದೆ.
ಈ ಹಿಂದೆ ಎಂಟು ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಅದು ಏಕೆ ಸಾಧ್ಯವಾಗಲಿಲ್ಲ ಎಂದು ನ್ಯಾಯಮೂರ್ತಿ ಎ.ಎಂ ಖಾನಿಲ್ಕರ್ ನೇತೃತ್ವದ ಪೀಠ ರಾಜ್ಯ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಅದಕ್ಕೆ ವಕೀಲರು, ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಇದನ್ನು ಆಲಿಸಿದ ನಂತರ ನ್ಯಾಯಪೀಠವು, ಇಂದಿನಿಂದ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು.
‘ಕಠಿಣ ಕ್ರಮದ ಸರ್ಕಾರ’ ಅಂತ ಟೀಕಿಸ್ತಿದ್ದಾರಲ್ಲಾ? ಸರ್ಕಾರಕ್ಕೆ ಎಷ್ಟು ಅಂಕ ಕೊಡ್ತೀರಿ? ಪಿಎಫ್​ಐ ಬ್ಯಾನ್ ಏಕಿಲ್ಲ? ಸಿಎಂ ಉತ್ತರ ಕೇಳಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − six =
Remember me
