ಬೆಂಗಳೂರು:ವಾರ್ಡ್‌ ಪುನರ್‌ವಿಂಗಡನೆ ಹಾಗೂ ಮೀಸಲಾತಿ ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಚುನಾವಣಾ ಪ್ರಕ್ರಿಯೆಯನ್ನು ಎಂಟು ವಾರಗಳಲ್ಲಿ ಆರಂಭಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.
ಅಲ್ಲದೆ ವಾರ್ಡ್‌ ಪುನರ್‌ವಿಂಗಡನೆಯನ್ನು ಎಂಟು ವಾರದೊಳಗಾಗಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಾರ್ಡ್‌ಗಳ ಪುನರ್ ವಿಂಗಡಣೆ ಮತ್ತು ಓಬಿಸಿ ಸೀಟುಗಳ ನಿರ್ಣಯಕ್ಕೆ ಎಂಟು ವಾರಗಳ ಸಮಯ ಬೇಕು ಎಂದು ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ತಯಾರಿಯ ಒಂದು ವಾರದ ಬಳಿಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನ್ಯಾಯಮೂರ್ತಿ ಕಾನ್ವಿಲ್ಕರ್ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿದೆ.
ಸದ್ಯ 198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದ್ದರಿಂದ ಚುನಾವಣೆ ವಿಳಂಬವಾಗಿತ್ತು. ಈ ನಡುವೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ-2020 ಅನುಸಾರ 243 ವಾರ್ಡ್‌ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್‌ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ 2020ರ ಡಿಸೆಂಬರ್‌ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಿ 243 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸರ್ಕಾರ ಸಲ್ಲಿಸಿತ್ತು.
ಸಿಎಂ ಪ್ರತಿಕ್ರಿಯೆ:
ಬಿಬಿಎಂಪಿ ಚುನಾವಣೆಗೆ ಸಿದ್ಧರಿದ್ದೇವೆ. ಸುಪ್ರೀಂ ಕೋಟ್೯ ನಿರ್ಧಾರ ಸ್ವಾಗತಿಸುತ್ತೇವೆ. ಒಬಿಸಿ ಮೀಸಲಾತಿ ಕೊಡಬೇಕೆಂಬುದು ನಮ್ಮ ವಾದವಾಗಿತ್ತು. ಅದಕ್ಕೆ ಮನ್ನಣೆ ಸಿಕ್ಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಬಿಸಿಗೂ ಮೀಸಲು ನೀಡಬೇಕೆಂಬ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸ್ಪಂದಿಸಿರುವುದು ಸಮಾಧಾನಕರ. ಬಿಬಿಎಂಪಿ ವಾರ್ಡ್ ಗಳ ಪುನರ್ವಿಂಗಡಣೆಗೆ ಸಂಬಂಧಿಸಿದಂತೆ ಸಮಿತಿ ವರದಿ ಕೊಟ್ಟಿದೆ. ಒಬಿಸಿ ಮೀಸಲು ಕುರಿತು ನ್ಯಾಯಾಧೀಶರ ನೇತೃತ್ವದ ಆಯೋಗದ ಕರಡು ವರದಿ ಅಂತಿಮ ಹಂತಕ್ಕೆ ಬಂದಿದೆ ಎಂದು ಅವರು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
