ಬೆಂಗಳೂರು:ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡಲಾಗಿದೆ. ಈ ಮೂಲಕ ದೇಶದಲ್ಲೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೂ ಬಿಬಿಎಂಪಿಗೆ ದಕ್ಕಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಾರ್ಡ್ ಹೆಚ್ಚಳ ಕುರಿತಂತೆ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆಗೆ ಕಳೆದ ಸೂಚಿಸಿತ್ತು. ನಂತರ ಇದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಈಗ ರಾಜ್ಯಪಾಲರು ಇದಕ್ಕೆ ಅನುಮೋದನೆ ನೀಡಿದ್ದಾರೆ.
ಈ ಮೂಲಕ ವಾರ್ಡ್​ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾಗಲಿದೆ. ಇದೀಗ ಚುನಾವಣೆ ಕೂಡ 243 ವಾರ್ಡ್​ಗಳಿಗೆ ನಡೆಯಬೇಕಿದೆ.
ಈ ಮೊದಲು ಇದ್ದ 198 198 ವಾರ್ಡ್​ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೆ ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದು, ಅದಿನ್ನೂ ವಿಚಾರಣೆಗೆ ಬಾಕಿ ಇದೆ. ಈ ನಡುವೆಯೇ ಇದೀಗ 243 ವಾರ್ಡ್​ಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ವಿಜ್ಞಾನ ಪದವೀಧರಿಗೆ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್‍ನಲ್ಲಿವೆ ಅವಕಾಶ

2021 ಆರಂಭ ಕೊಡಲಿಲ್ಲ ಲಕ್​: ರಾಗಿಣಿ ಬೇಲ್​ ಅರ್ಜಿ ಮುಂದೂಡಿಕೆ

ಕೋಳಿಗಳಲ್ಲಿ ಕಂಡುಬಂತು ಪಾಸಿಟಿವ್​: ಮಾಂಸದಂಗಡಿ ಮುಚ್ಚಲು ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
