ಬೆಂಗಳೂರು :2020-21ನೇ ಸಾಲಿನ ಎರಡು ವರ್ಷಗಳ ಬಿ.ಎಡ್​ ಕೋರ್ಸ್​ಗೆ ಸೇರಲು ಬಯಸುವವರಿಗೆ ಅರ್ಜಿ ಸಲ್ಲಿಸಲು ಈ ಮೊದಲು ನಿಗದಿ ಮಾಡಲಾಗಿದ್ದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಅಂತಿಮ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದ್ದು, ಈ ಮೂಲಕ ಕೋರ್ಸ್ ಸೇರಬಯಸುವವರಿಗೆ ಇನ್ನು ಮೂರು ದಿನಗಳ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
2020-21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯ ಸರ್ಕಾರಿ, ಮಾನ್ಯ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ ಮೂಲಕ ದಿನಾಂಕ 13-01-2021ರಿಂದ 26-01-2021ರವರೆಗೆ ಆಹ್ವಾನಿಸಲಾಗಿತ್ತು. ಆದರೆ ಈಗ ಅವಧಿಯನ್ನು 31ರವರೆಗೆ ವಿಸ್ತರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವೆಬ್ ಸೈಟ್​ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಓದಿಕೊಂಡು, ಕ್ರಮಬದ್ಧವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅಧಿಕೃತ ವೆಬ್​ಸೈಟ್​http://www.schooleducation.kar.nic.in
ಎಸ್​ಎಸ್​ಎಲ್​ಸಿಯಿಂದ ಉನ್ನತ ಪದವಿಯವರೆಗೂ ಔಷಧ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿವೆ ಹುದ್ದೆಗಳು

ಎಸ್‌ಎಸ್‌ಎಲ್‌ಸಿ ಆಗಿದ್ಯಾ? ಹಾಗಿದ್ರೆ ಆರ್‌ಬಿಐನಲ್ಲಿದೆ ಉದ್ಯೋಗ- ಬೆಂಗಳೂರಿನಲ್ಲೂ ಅವಕಾಶ

ಎಚ್‍ಎಎಲ್ ಶಿಕ್ಷಣ ಸಂಸ್ಥೆಯಲ್ಲಿ ಬೋಧಕ- ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 14 =
Remember me
