ಬೆಳಗಾವಿ:ಸಿಯಾಚಿನ್ ಗ್ಲೇಷಿಯರ್ ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಮರಾಠಾ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಅಂತಿಮನಮನ ಸಲ್ಲಿಸಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು.
ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ ತಾಲ್ಲೂಕಿನ ಬಸರಗಿ ಬಿ.ಕೆ. ಗ್ರಾಮಕ್ಕೆ ರಸ್ತೆ ಮೂಲಕ ಕಳಿಸಿಕೊಡಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಡಿಸಿಪಿ ರವೀಂದ್ರ ಗಡಾದಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಮರಾಠಾ ಲಘುಪದಾತಿ ದಳದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿಂಗಪುರದಲ್ಲಿ ರೆಸ್ಟ್​? ರಾತ್ರೋರಾತ್ರಿ ವಿಮಾನ ಏರಿದ ಮಾಜಿ ಸಿಎಂ ಕುಮಾರಸ್ವಾಮಿ

VIDEO: ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ- ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
