ಬೆಳಗಾವಿ:ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್​ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ.
ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್​ ಬರೆದಿದ್ದ. ಇದನ್ನುನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏಳು ತಿಂಗಳ ಹಿಂದೆ ಕರಡಿಗುದ್ದಿ ಗ್ರಾಮದ ನಾಗರಾಜ್ ಎಂಬುವರ ಜತೆಗೆ ಅಕ್ಷತಾ ಅವರ ವಿವಾಹವಾಗಿತ್ತು. ಕೆಲವು ದಿನಗಳ ನಂತರ ಅವರು ತಮ್ಮ ತವರಿಗೆ ವಾಪಸ್​ ಆಗಿದ್ದರು. ಇದನ್ನು ನೋಡಿದ್ದ ಸಂತೋಷ್​ ತನ್ನ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ‘ನಿನ್ನ ಪ್ರೀತಿಸುತ್ತೇನೆ, ನಿನ್ನನ್ನು ಬಿಡುವುದಿಲ್ಲ, ನಿನ್ನ ಹೆಸರು ಬರೆದಿಟ್ಟು ವಿಷ ಕುಡಿದು ಸಾಯುತ್ತೇನೆ’ ಎಂದು ಸ್ಟೇಟಸ್ ಹಾಕಿಕೊಂಡಿದ್ದ. ಜತೆಗೆ ವಿಷವನ್ನೂ ಸೇವಿಸಿದ್ದ.
ಆದರೆ ಸ್ಟೇಟಸ್​ನೋಡಿ ಯುವತಿ ಪ್ರಾಣ ಕಳೆದುಕೊಂಡಿದ್ದರೆ ಸಂತೋಷ್​ ಬದುಕುಳಿದಿದ್ದಾನೆ. ಈತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ಪ್ರಿಯಕರನೊಂದಿಗೆ ಹೋಗಿದ್ದಾಕೆಯನ್ನು ಬೆತ್ತಲೆಗೊಳಿಸಿದ ಗಂಡ: ಆತನನ್ನು ಹೊತ್ತು ತಿರುಗುವಂತೆ ಹೇಳಿದ ಗ್ರಾಮಸ್ಥರು!

ಆಲಿಯಾ ಭಟ್​ ಹಾಟ್​ ಫೋಟೋ ವೈರಲ್​: ಫಿಟ್​ನೆಸ್​​ ನೋಡಿ ಬೆರಗಾದ ಕತ್ರಿನಾ, ಮಲೈಕಾ ಅರೋರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fourteen =
Remember me
