ಬೆಳಗಾವಿ:ವಿದ್ಯಾರ್ಥಿನಿಯರ ಜತೆ ಶಿಕ್ಷಕರ ಕಾಮದಾಟ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬರುತ್ತಿರುವ ನಡುವೆಯೇ ಬೆಳಗಾವಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ.
ಹೈಸ್ಕೂಲ್‌ ವಿದ್ಯಾರ್ಥಿನಿಯೊಬ್ಬಳಿಗೆ ಸರ್ಕಾರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಬಾಲಕಿಯನ್ನು ಪುಸಲಾಯಿಸಿ ರೊಮಾನ್ಸ್‌ ಮಾಡಿದ ಶಿಕ್ಷಕ ಮೊಬೈಲ್‌ನಲ್ಲಿ ಫೋಟೋ ತೆಗೆದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿದ್ಯಾರ್ಥಿನಿ ಎಂಟನೆ ಕ್ಲಾಸ್‌ನಲ್ಲಿ ಇರುವಾಗಲೇ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ. ವಿದ್ಯಾರ್ಥಿನಿ 10ನೇ ಕ್ಲಾಸ್‌ಗೆ ಹೋಗುವವರೆಗೂ ಇದೇ ಮುಂದುವರೆದಿದೆಯಂತೆ. ನಂತರ ವಿದ್ಯಾರ್ಥಿನಿ ಕಾಲೇಜು ಸೇರಿದಾಗ ಮನೆಯಲ್ಲಿ ಆಕೆಗೆ ಮದುವೆ ಗೊತ್ತು ಮಾಡುವ ವೇಳೆ ಶಿಕ್ಷಕ ಈ ಫೋಟೋಗಳನ್ನು ತಮ್ಮ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಹಾಕಿಕೊಂಡು ವೈರಲ್‌ ಮಾಡಿರುವುದಾಗಿ ಹೇಳಲಾಗಿದೆ.
ಯುವತಿ ಮದುವೆ ನಿಲ್ಲಿಸುವ ದುರುದ್ದೇಶದಿಂದ ಶಿಕ್ಷಕ ಈ ರೀತಿ ಮಾಡುತ್ತಿರುವುದಾಗಿ ಆರೋಪಿಸಲಾಗಿದೆ. ಮೂರು ದಿನಗಳ ಹಿಂದೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಫೋಟೋಗಳು ವೈರಲ್ ಆಗುತ್ತಿದ್ದಂತೆ ದೈಹಿಕ ಶಿಕ್ಷಣ ಶಿಕ್ಷಕನಿಗೆ ಜನರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವತಿಯ ಕುಟುಂಬಸ್ಥರು, ಗ್ರಾಮಸ್ಥರು ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಥಳಿಸಿದ್ದಾರೆ.
ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿರುವ ಹಿನ್ನೆಲೆಯಲ್ಲಿ, ಯುವತಿ ನೀಡಿದ ದೂರಿನ ಮೇರೆಗೆ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ.(ದಿಗ್ವಿಜಯ ನ್ಯೂಸ್‌)
ಇಲ್ಲಿದೆ ನೋಡಿ ಥಳಿಸುತ್ತಿರುವ ವಿಡಿಯೋ:
ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡುತ್ತಿರುವ ಆರೋಪ ಹೊತ್ತ ಬೆಳಗಾವಿ ಜಿಲ್ಲೆಯ ಸವದತ್ತಿನ ಶಾಲಾ ಶಿಕ್ಷಕನನ್ನು ಗ್ರಾಮಸ್ಥರು ಥಳಿಸುತ್ತಿರುವ ದೃಶ್ಯpic.twitter.com/PQNOGIEHiq
— Vijayavani (@VVani4U)June 9, 2022

ಗಂಡ-ಹೆಂಡ್ತಿ ಮಧ್ಯೆ ಜಗಳ ತಂದಿಟ್ಟ ಮ್ಯಾಗಿ! ಬಳ್ಳಾರಿ ಯುವಕನ ಕಷ್ಟ ನೋಡಲಾಗದೇ ಡಿವೋರ್ಸ್​ ಕೊಟ್ಟ ಕೋರ್ಟ್​

ಡೇಟಿಂಗ್​ ಮಾಡಿ ಪ್ರೀತಿ ರಿಜೆಕ್ಟ್​ ಮಾಡಿದ್ಲು: ಭಗ್ನ ಪ್ರೇಮಿಯಿಂದ ಹೀಗೊಂದು ಟ್ಯಾಟೂ ಸೇಡು!

ನೌಕರನ ಹೆಂಡ್ತಿ ಕಾಟಕ್ಕೆ ಬರ್ಬರವಾಗಿ ಕೊಲೆಯಾದ ಮಾಲೀಕ: ಬಯಲಾಯ್ತು ಬೆಂಗಳೂರು ಉದ್ಯಮಿಯ ಮರ್ಡರ್​ ರಹಸ್ಯ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × 2 =
Remember me
