ಬಳ್ಳಾರಿ:2019ರಲ್ಲಿ ನಡೆದ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬರ ಜೀವ ಕಾಪಾಡಿದ ರೈಲ್ವೇ ಕಾನ್ಸ್​ಟೆಬಲ್​ ಎಸ್​.ರಫೀ ಅವರಿಗೆ “ಜೀವನ್ ರಕ್ಷ” ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ.
ಚಲಿಸುವ ರೈಲಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿದ ಹಿನ್ನೆಲೆಯಲ್ಲಿ ಈ ಪದವಿ ಲಭಿಸಿದೆ. ಈ ಪ್ರಶಸ್ತಿಗೆ ಕರ್ನಾಟಕದಿಂದ ಆಯ್ಕೆಯಾದ ಏಕೈಕ ವ್ಯಕ್ತಿಯಾಗಿದ್ದಾರೆ ರಫೀ.
2019ರಲ್ಲಿ ಬಳ್ಳಾರಿಯ ರೈಲ್ವೇ ನಿಲ್ದಾಣದಲ್ಲಿ ಚಲಿಸುವ ರೈಲು ಹತ್ತುವ ಸಮಯದಲ್ಲಿ ಪ್ರಯಾಣಿಕರೊಬ್ಬರು ಜಾರಿ ಬಿದ್ದಿದ್ದರು. ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ ಮಾಡಿದ್ದರು ರಫೀ. ಇವರು ಬಳ್ಳಾರಿ ನಗರದ ಕೇಂದ್ರ ರೈಲ್ವೇ ರಕ್ಷಣದಳದ ಕಾನ್ಸ್​ಟೆಬಲ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇವರಿಗೆ ಪ್ರಮಾಣ ಪತ್ರ, ಮೆಡಲ್ ಹಾಗೂ 1 ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ.
ಘಟನೆಯ ಸಂಪೂರ್ಣ ಸನ್ನಿವೇಶ ನಿಲ್ದಾಣದ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಅದರ ವಿಡಿಯೋ ಇಲ್ಲಿದೆ ನೋಡಿ:
ಚಲಿಸುವ ರೈಲಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿದ ಬಳ್ಳಾರಿಯ ರೈಲ್ವೇ ಕಾನ್ಸ್​ಟೆಬಲ್​ ಎಸ್​.ರಫೀ ಅವರಿಗೆ "ಜೀವನ್ ರಕ್ಷ" ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ. ರಕ್ಷಣೆ ಮಾಡಿರುವ ವಿಡಿಯೋ ಇಲ್ಲಿದೆ…pic.twitter.com/kRchBFyUtb
— Vijayavani (@VVani4U)May 31, 2022

15 ಮಂದಿ ಅಕೌಂಟ್‌ಗೆ ಎಸ್‌ಬಿಐನಿಂದ 1.5 ಕೋಟಿ ರೂ: ಮೋದಿ ಕೊಟ್ಟರೆಂದು ಕುಣಿದಾಡಿದ ಗ್ರಾಹಕರು- ಆಗಿದ್ದೇನು?

ರಷ್ಯಾ ಅಧ್ಯಕ್ಷ ಪುತಿನ್​ ಬದುಕೋದು ಮೂರೇ ವರ್ಷ: ಆತಂಕಕಾರಿ ರಹಸ್ಯ ಬಿಚ್ಚಿಟ್ಟ ಗುಪ್ತಚರ ಅಧಿಕಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + thirteen =
Remember me
