ಬೆಂಗಳೂರು:10ನೇ ತರಗತಿ (ಕನ್ನಡ ವಿಷಯ 5ನೇ ಘಟಕ) ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂದು ಹರಿದಾಡುತ್ತಿರುವ ಸುದ್ದಿಗೆ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟಿಲ್ಲ ಎಂದು ಹೇಳಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ತೆರೆ ಎಳೆದಿದೆ. ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಗತ್ ಸಿಂಗ್ ಪಾಠವನ್ನು ಕೈ ಬಿಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರಸಲಾಗಿದೆ. ಈ ಮೂಲಕ ಮಹಾನ್ ದೇಶಪ್ರೇಮಿ ಭಗತ್ ಸಿಂಗ್​ ಅವರಿಗೆ ರಾಜ್ಯ ಸರ್ಕಾರ ಅವಮಾನ ಮಾಡಿದೆ ಎಂಬ ಸುದ್ದಿ ಹರಡಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಇದಕ್ಕೆ ಸ್ಪಷ್ಟನೆ ನೀಡಿರುವ ಸರ್ಕಾರ, ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯ ಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ, ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಲಾಗಿತ್ತು. ಈ ಸಮಿತಿಯು 6ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದೆ.
ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಪ್ರಸ್ತುತ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ಭಗತ್‌’ ಸಿಂಗ್ ಗದ್ಯವನ್ನು ಕೈಬಿಟ್ಟು ಹೆಡಗೆವಾರ್ ಕುರಿತ ಗದ್ಯ ಸೇರಿಸಲಾಗಿದೆ ಎಂದು ಸುದ್ದಿ ಹರಡಿದಾಡುತ್ತಿದೆ. ಆದರೆ, ವಾಸ್ತವವಾಗಿ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ. ಸದ್ಯ ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯ ಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಹೇಳಿದೆ.
ಆಜಾನ್​ ಕೂಗೋದು ಒಂದು ಗಂಟೆ ಪೋಸ್ಟ್​ಪೋನ್​​: ಮುಸ್ಲಿಂ ಮುಖಂಡರ ಒಮ್ಮತದ ತೀರ್ಮಾನ

ಬಾಲ್ಯದಲ್ಲೇ ಮದ್ವೆ ಮಾಡಿದ್ರೆ ಈ ಸಮಸ್ಯೆನೇ ಬರ್ತಿರಲಿಲ್ಲ ಎಂದು ಅಜ್ಜಿಯನ್ನೇ ಕೊಂದುಹಾಕಿದ ಮೊಮ್ಮಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
