ಕೋಲಾರ: ಕೋಲಾರದಲ್ಲಿ ತಯಾರಾದ ದೇಶದ ಅತಿದೊಡ್ಡ ತ್ರಿವರ್ಣ ಧ್ವಜ ಇಂದು ಇಲ್ಲಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅನಾವರಣಗೊಂಡಿತು. ಬೃಹತ್ ರಾಷ್ಟ್ರ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ ನೆರವೇರಿಸಲಾಯಿತು.
ಈ ಬೃಹತ್​ ಬಾವುಟದ ಹಾರಾಟ ನೋಡಿದವರು ರೋಮಾಂಚನಗೊಂಡರು. ಭಾರಿ ಜನಸ್ತೋಮದ ನಡುವೆ ಇದನ್ನು ಅನಾವರಣಗೊಳಿಸಲಾಯಿತು.1.30 ಲಕ್ಷ ಚದರಡಿಯ ಬೃಹತ್ ತ್ರಿವರ್ಣ ಧ್ವಜ ಇದಾಗಿದೆ. ಇದು 204 ಅಡಿ ಉದ್ದ ಹಾಗೂ 630 ಅಡಿ ಅಗಲ ಹೊಂದಿದೆ. 13 ಸಾವಿರ ಮೀಟರ್​ ಬಟ್ಟೆಯಲ್ಲಿ ಇದನ್ನು ತಯಾರಿಸಲಾಗಿದೆ. 7 ದಿನಗಳಲ್ಲಿ 25 ಜನರು ಸೇರಿ ಇದನ್ನು ರೆಡಿ ಮಾಡಿದ್ದಾರೆ. ಕೋಲಾರ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಇದನ್ನು ತಯಾರಿಸಲಾಗಿದೆ.
ಇದನ್ನು ಲಿಮ್ಕಾ ಬುಕ್​ ಆಫ್​ ರೆಕಾರ್ಡ್​ಗೂ ಸೇರಿಸಲಾಗುತ್ತಿದೆ. ಕೈಯಿಂದ ನಿರ್ಮಾಣ ಮಾಡಲಾಗಿರುವ ರಾಷ್ಟ್ರಧ್ವಜ ಎಂಬ ಹೆಗ್ಗಳಿಕೆ ಕೂಡ ಇದಕ್ಕಿದೆ. ಈ ಧ್ವಜ ಹಿಡಿದುಕೊಳ್ಳಲು 2000 ಜನರನ್ನು ನೇಮಿಸಲಾಗಿತ್ತು.(ದಿಗ್ವಿಜಯ ನ್ಯೂಸ್​)
ವಿಡಿಯೋ ಇಲ್ಲಿದೆ ನೋಡಿ:
ಕೋಲಾರದಲ್ಲಿ ತಯಾರಾದ ದೇಶದ ಅತಿದೊಡ್ಡ ತ್ರಿವರ್ಣ ಧ್ವಜ ಇಲ್ಲಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅನಾವರಣಗೊಂಡಿತು. ಬೃಹತ್ ರಾಷ್ಟ್ರ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ ನೆರವೇರಿಸಲಾಯಿತು.pic.twitter.com/ClqWYf8uME— Vijayavani (@VVani4U)August 15, 2022
ಕೋಲಾರದಲ್ಲಿ ತಯಾರಾದ ದೇಶದ ಅತಿದೊಡ್ಡ ತ್ರಿವರ್ಣ ಧ್ವಜ ಇಲ್ಲಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅನಾವರಣಗೊಂಡಿತು. ಬೃಹತ್ ರಾಷ್ಟ್ರ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ ನೆರವೇರಿಸಲಾಯಿತು.pic.twitter.com/ClqWYf8uME
ಇನ್ಮುಂದೆ ಹಲೋ ಬದಲು ವಂದೇ ಮಾತರಂ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ‘ಮಹಾ’ ಸೂಚನೆ
PHOTOS: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಟಿ ತಾರಾ ವಿಶೇಷ ಫೋಟೋ ಶೂಟ್‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
