ಮಂಡ್ಯ: ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಭದ್ರಗೊಳಿಸಲು ಕಮಲ ಕಲಿಗಳಿಂದ ತಂತ್ರ ನಡೆಯುತ್ತಿದೆ. ಮುಂದಿನ ತಿಂಗಳು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ರಾಷ್ಟ್ರೀಯ ನಾಯಕರನ್ನು ಕರೆಸಿ ಶಕ್ತಿ ಪ್ರದರ್ಶಿಸಲು ಕಮಲ ಪಡೆ ತಯಾರಿ ನಡೆಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಸಲಾಗಿದ್ದು, ಆ ಮೂಲಕ ಮಂಡ್ಯ ಬಿಜೆಪಿ ರಣ ಕಹಳೆ ಮೊಳಗಿಸಲು ಮಾಸ್ಟರ್ ಪ್ಲ್ಯಾನ್‌ ರೂಪಿಸಲಾಗುತ್ತಿದೆ.
ಮಂಡ್ಯ ಮಾತ್ರವಲ್ಲದೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗಟ್ಟಿಗೊಳಿಸಲು ಉದ್ದೇಶದಿಂದ ಸಮಾವೇಶ ನಡೆಸಲು ಉದ್ದೇಶಸಲಾಗಿದ್ದು, ಸಮಾವೇಶದಲ್ಲಿ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ಚಿಂತನೆ ನಡೆಸಲಾಗಿದೆ.
ಬೃಹತ್ ಸಮಾವೇಶಕ್ಕೂ ಮುನ್ನ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ ಕರೆಯಲಾಗಿದ್ದು, ಪ್ರತಿ ತಾಲೂಕಿನಲ್ಲೂ ಸಭೆ ನಡೆಸಿ ಬಿಜೆಪಿ ನಾಯಕರು ಸಂಘಟನೆ ನಡೆಸುತ್ತಿದ್ದಾರೆ. ಸಚಿವರಾದ ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತಿದೆ. ಈಗಾಗಲೇ ಮಂಡ್ಯ, ಮಳವಳ್ಳಿ, ಮದ್ದೂರಿನಲ್ಲಿ ಸಭೆ ನಡೆಸಲಾಗಿದೆ.
ಸುಮಲತಾ ಬಿಜೆಪಿ ಸೇರ್ಪಡೆ?ಶಕ್ತಿ ಪ್ರದರ್ಶನದ ಸಮಾವೇಶದಲ್ಲೇ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಸಾಧ್ಯತೆ ದಟ್ಟವಾಗಿದೆ. ರಾಷ್ಟ್ರೀಯ ನಾಯಕರ ಸಮ್ಮುಖದಲ್ಲೇ ಸುಮಲತಾ ಮತ್ತು ಅವರ ತಂಡ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ. ಸುಮಲತಾ ಅವರನ್ನು ಪಕ್ಷಕ್ಕೆ ಕರೆತಂದು ಸಂಘಟನೆ ಹೆಚ್ಚಿಸಲು ನಾಯಕರು ಯೋಜನೆ ರೂಪಿಸಿದ್ದಾರೆ. ಮಂಡ್ಯದಲ್ಲಿ ನಡೆಯುವ ಬೃಹತ್ ಸಮಾವೇಶ ಪಕ್ಷ ಸೇರಲು ಸುಮಲತಾ ಒಲವು ತೋರಿದ್ದಾರೆ ಎನ್ನಲಾಗಿದೆ.
ಮುಂಬರುವ ಚುನಾವಣೆಯಲ್ಲಿ ಮಂಡ್ಯದಲ್ಲಿ 3-4 ಸ್ಥಾನ ಗೆಲ್ಲುವುದು ಬಿಜೆಪಿ ಯೋಜನೆಯಾಗಿದೆ. ಈ ಮೂಲಕ ಜೆಡಿಎಸ್ ಭದ್ರಕೋಟೆ ಹೊಡೆದುರುಳಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದ್ದು, ಅದಕ್ಕಾಗಿಯೇ ವರ್ಷ ಇರುಲಾಗಲೇ ಮಂಡ್ಯದಲ್ಲಿ ಚುನಾವಣಾ ತಯಾರಿ ಆರಂಭ ಮಾಡಲಾಗಿದೆ. ಸಭೆ ಸಮಾರಂಭಗಳ ಜತೆ ಜತೆಗೆ ಜೆಡಿಎಸ್, ಕಾಂಗ್ರೆಸ್ ಮುಖಂಡರನ್ನು ಸೆಳೆಯುವ ತಂತ್ರ ರೂಪಿಸಲಾಗುತ್ತಿದೆ(ದಿಗ್ವಿಜಯ ನ್ಯೂಸ್‌)
ಸಚಿವನ ಪುತ್ರ ಮತ್ತು ಬರುವ ಪಾನೀಯ ಕುಡಿಸಿ ರೇಪ್‌ ಮಾಡಿದ- ನಗ್ನ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾನೆ

ಬಿಜೆಪಿ ಮುಖಂಡನಿಂದ ಭಾರಿ ವಂಚನೆ? ಡೆತ್‌ನೋಟ್‌ ಬರೆದಿಟ್ಟು ಮೈಸೂರು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
