ನವದೆಹಲಿ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರವಾಗಿರುವ ಶಿಕಾರಿಪುರ ಕ್ಷೇತ್ರದಲ್ಲೇ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿಯಿಂದ ಯಡಿಯೂರಪ್ಪನವರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. 2006-07ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂಬ ಯಡಿಯೂರಪ್ಪ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. 2020ರ ಡಿಸೆಂಬರ್ 22ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಅವರು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್​, ತನಿಖೆಗೆ ತಡೆ ನೀಡಿದೆ.
ಏನಿದು ಘಟನೆ?2006–07ರಲ್ಲಿ ಹಲವು ಎಕರೆ ಭೂಮಿಯನ್ನು ಅಕ್ರಮ ಡಿ–ನೋಟಿಫೈ ಮಾಡಿದ್ದಾರೆ ಎನ್ನಲಾದ ಪ್ರಕರಣ ಇದಾಗಿದೆ.
ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ 2015ರ ಫೆಬ್ರುವರಿ 18ರಂದು ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರಿನ ಜಿಲ್ಲಾ ನ್ಯಾಯಾಲಯ ನಿರ್ದೇಶನ ನೀಡಿತ್ತು. ಇದರಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನು ಅನ್ನು ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ 2015ರ ಫೆಬ್ರುವರಿ 21ರಂದೇ ಮನವಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಸಡಿಲಿಕೆ ಮಾಡಲಾಗದು ಎಂದಿದ್ದ ಹೈಕೋರ್ಟ್, ಸಾರ್ವಜನಿಕ ಸೇವಕರು, ಸಂಸದರು ಹಾಗೂ ಶಾಸಕರು ಶಾಮೀಲಾಗಿದ್ದಾರೆ ಎನ್ನಲಾದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ ಅಪರಾಧ ನ್ಯಾಯಾಲಯಗಳು ಆದೇಶಿಸಿರುವ ತನಿಖೆಯ ಮೇಲೆ ನಿಗಾ ಇರಿಸಿ ಎಂದು ಲೋಕಾಯುಕ್ತ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು. ಇದನ್ನು ಯಡಿಯೂರಪ್ಪನವರು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದರು.(ಏಜೆನ್ಸೀಸ್​)
ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್​ವೈ ಮಹತ್ವದ ಘೋಷಣೆ

ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ- ನೆಹರೂ ಹಾರಿಸಿದ ಧ್ವಜ ಟ್ವೀಟ್​ ಮಾಡಿ ಪ್ರಧಾನಿ ಮನವಿ

ಗರ್ಭಪಾತದ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕಾಯ್ದೆ ವ್ಯಾಪ್ತಿ ವಿಸ್ತರಣೆ- ಅವಿವಾಹಿತೆಗೆ ಅಸ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
