ಬೆಂಗಳೂರು :ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಕಚೇರಿ, ಸಂಘ-ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಕರೊನಾ ಒಬ್ಬರಿಂದ ಒಬ್ಬರಿಗೆ ಹರಡುವ ಭೀತಿ ಇರುವ ಕಾರಣದಿಂದ ವಿನಾಯಿತಿ ನೀಡಲಾಗಿದೆ.
ಆದರೆ ಇದೀಗ ಕೆಲವು ಕಡೆಗಳಲ್ಲಿ ಈ ವಿನಾಯಿತಿಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ಪುನಃ ಜಾರಿಗೆ ಬಂದಿದೆ. ಇದೀಗ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಆಡಳಿತ ಸುಧಾರಣೆ-ತಪಾಸಣೆ) ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಸಿ.ಹರ್ಷರಾಣಿ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಹೀಗಿದೆ:ರಾಜ್ಯದ ಕೆಲವೊಂದು ಕಡೆ ಕರೊನಾ ವೈರಾಣು ಕಂಡು ಬಂದ ಹಿನ್ನಲೆಯಲ್ಲಿ ಕಳೆದ ಏಪ್ರಿಲ್​ 27ರಂದು ಹೊರಡಿಸಿದ್ದ ಆದೇಶದಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವಲ್ಲಿ ವಿನಾಯಿತಿ ನೀಡಲಾಗಿತ್ತು.
ಪ್ರಸ್ತುತ ಕೋವಿಡ್-19 ಪ್ರಕರಣಗಳು ಮತ್ತು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬೆಂಗಳೂರು ಮತ್ತು ಬೆಂಗಳೂರಿನ ಹೊರಗೆ ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನರಾಂಭಿಸಲಾಗಿದೆ.
ಬಯೋಮೆಟ್ರಿಕ್​ ಎಲ್ಲಾ ಯಂತ್ರಗಳ ಪಕ್ಕದಲ್ಲಿ ಸೂಕ್ತ ಸ್ಯಾನಿಟೈಸರ್​ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಇಂದಿನಿಂದ ಮತ್ತೆ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲಾಗಿದೆ.
ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ

ಸೋನಿಯಾ- ಮನ್​ಮೋಹನ್​ ಸಿಂಗ್​ ಸೀಕ್ರೆಟ್​ ಬಿಚ್ಚಿಟ್ಟ ಒಬಾಮಾ: ಭಾರತದಲ್ಲಿ ಸಂಚಲನ!

ತಡವಾಗಿ ಬಂದದ್ದೂ ಅಲ್ಲದೇ ವಿಮಾನಯಾನ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ ಸಬ್​ ಇನ್ಸ್​ಪೆಕ್ಟರ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + twenty =
Remember me
