ಕೋಲಾರ:ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರೂ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ.
ಕೋಲಾರ ನಗರದ ಎ.ಎಪ್ ಕಲ್ಯಾಣ ಮಂಟಪದಲ್ಲಿ ಸಭೆ ಮಾಡಿ ನೂರಾರು ಕಾರ್ಯಕರ್ತರಿಗೆ ವರ್ತೂರು ಪ್ರಕಾಶ್​ ಬಿರಿಯಾನಿ ಊಟ ಹಾಕಿಸಿದ್ದರು. ಕರೊನಾ ನಿಯಮ ಉಲ್ಲಂಘನೆ ಮಾಡಿ ಊಟ ಹಾಕಿಸಿದ್ದ ಹಿನ್ನೆಲೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
‘ನಮ್ಮ ಕಾಂಗ್ರೆಸ್​’ನ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೂಲೂರು ಅಂಜಿನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್, ಎ.ಎಫ್. ಕನ್ವೆಂಕ್ಷನ್ ಹಾಲ್ ಮಾಲೀಕ ಸೇರಿ 105 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯ ವಿವಿಧ ಕಲಮುಗಳ ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ರೆವಿನ್ಯೂ ಇನ್ಸ್​ಪೆಕ್ಟರ್​ ವಿಜಯ ದೇವ್ ಮಾಹಿತಿ ನೀಡಿದ್ದಾರೆ.
ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ ಜಾರಿ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?

24 ವಿವಿಗಳು ನಕಲಿ- ಇಲ್ಲಿದೆ ಡಿಟೇಲ್ಸ್​: ದಾಖಲೆ ಮಾಡುವ ಮುನ್ನ ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
