ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪಕ್ಷದ ವರಿಷ್ಠರು ಹಾಗೂ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸಚಿವ, ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ.
ಯಾವುದೇ ತಪ್ಪು ಮಾಡದ ಸಿಎಂ ಬಿಎಸ್ ವೈ ತಪ್ಪು ಮಾಡಿದ್ದಾರೆ ಎಂದು ಹಿರಿಯ ಸಚಿವರಾಗಿ ಈಶ್ವರಪ್ಪ ಆರೋಪಿಸಿರುವುದು ಸರಿಯಲ್ಲವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಯಾವುದೇ ವಿಷಯ ಚರ್ಚಿಸುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅವಕಾಶವಿದೆ. ಆದರೆ ಈ ಸಭೆಯಲ್ಲಿ ಯಾವುದೇ ವಿಷಯ ಪ್ರಸ್ತಾಪಿಸದೆ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುದಾನವನ್ನು ಪಕ್ಷಾತೀತವಾಗಿ ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ ಸಿಎಂ ಬಿಎಸ್ ವೈ ತಪ್ಪೇನಿದೆ ? ಎಂದು ಶಾಸಕರಾದ ಮಹೇಶ್ ಕುಮಟಳ್ಳಿ, ಪರಣ್ಣ ಮುನವಳ್ಳಿ, ಮಹದೇವಪ್ಪ ಯಾದವಾಡ, ಅರುಣ್ ಕುಮಾರ್ ಪೂಜಾರಿ ಮರು ಪ್ರಶ್ನಿಸಿದ್ದಾರೆ.
ಉಪ ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರವಾಗುವಂತೆ ನಡೆದುಕೊಂಡಿರುವುದು ಶೋಭೆ ತೋರುವುದಿಲ್ಲ. ನಾವೂ ವರಿಷ್ಠರಿಗೆ ದೂರು ಸಲ್ಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಸಿಎಂ ಹಸ್ತಕ್ಷೇಪ ಮಾಡಿಲ್ಲ, ಪ್ರಧಾನಿ, ರಾಜ್ಯಪಾಲರಿಗೆ ದೂರು ನೀಡಿರುವುದು ಸರಿಯಲ್ಲ: ರೇಣುಕಾಚಾರ್ಯ

ಮುಖ್ಯಮಂತ್ರಿಯನ್ನು ಕಟ್ಟಿಹಾಕಲು ನಡೀತಿದೆ ಕೈ ನಾಯಕರ ಮಹತ್ವದ ಸಭೆ!

ಬಿಜೆಪಿ ಸಂಸದೆ, ನಟಿ ಕಿರಣ್​ ಖೇರ್ ಜನತೆ ಮುಂದೇಕೆ ಕಾಣಿಸಿಕೊಳ್ಳುತ್ತಿಲ್ಲ? ಪಕ್ಷ ನೀಡಿದೆ ನೋಡಿ ಈ ಉತ್ತರ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 4 =
Remember me
