ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿಬಾರಿಯಂತೆ ಈ ಸಲವೂ ಕನ್ನಡ ಪುಸ್ತಕ ಪ್ರಾಧಿಕಾರ  ಅನೇಕ ಪುಸ್ತಕಗಳ ಮೇಲೆ ರಿಯಾಯಿತಿ ಘೋಷಿಸಿದೆ.
ನವೆಂಬರ್‌ ತಿಂಗಳು ಪೂರ್ತಿಯಾಗಿ ಈ ರಿಯಾಯಿತಿ ಇರಲಿದೆ. ಶೇ. 50ರಷ್ಟು ರಿಯಾಯಿತಿ ಪ್ರತಿ ಪುಸ್ತಕದ ಮೇಲೆ ಸಿಗಲಿದೆ. ಈ ಕುರಿತು ಕನ್ನಡ ಪುಸ್ತಕ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಅದು ಹೇಳಿದೆ.
ಇದನ್ನೂ ಓದಿ:ಸೌಂಡ್ ಆಫ್ ಮ್ಯೂಸಿಕ್ ಇದೆ; ಸೌಂಡ್ ಆಫ್ ರುಪಿ ಬೇಕು: ಹಂಸಲೇಖ
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಇದರ ಜತೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಇಂಟರ್‌ನೆಟ್‌ನಲ್ಲಿಯೂ ಶೇ.50ರ ರಿಯಾಯಿತಿಯಲ್ಲಿ ಪಡೆಯಬಹುದು.
http://www.kannadapustakapradhikara.com/ಮೇಲೆ ಕ್ಲಿಕ್‌ ಮಾಡಿ ನಿಮ್ಮ ಪುಸ್ತಕಗಳನ್ನು ಆಯ್ಕೆ ಮಾಡಿ, ಆನ್‌ಲೈನ್‌ ಮೂಲಕವೇ ಹಣ ಪಾವತಿಸಿ ರಿಯಾಯಿತಿ ಪುಸ್ತಕ ಪಡೆಯಬಹುದು. ಅಂಚೆಯ ಮೂಲಕ ಕೂಡ ಪುಸ್ತಕ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಪ್ರಾಧಿಕಾರ ಹೇಳಿದೆ.
ಮೊಬೈಲ್‌‌‌ ಚಟಕ್ಕೆ ಮತ್ತೊಂದು ಬಲಿ: ಆಟವಾಡಬೇಡ ಎಂದುದಕ್ಕೆ ಬಾಲಕ ಆತ್ಮಹತ್ಯೆ!

ಸೈಕಲ್‌ ಮೇಲೆ ಬಂದ ಇಂಧನ ಸಚಿವ- ವಿದ್ಯುತ್‌ ಬಿಲ್‌ ಪಾವತಿಸಿದ ಗ್ರಾಹಕರು!

ಲಾಲುಗೆ ಸಿಕ್ತಿಲ್ಲ ಬೇಲ್‌: ಸಿಬಿಐನಿಂದಾಗಿ ಜೈಲಿನಿಂದ ಇಲ್ಲ ಮುಕ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eleven =
Remember me
