ಮೈಸೂರು:ಅಣ್ಣ ಬೈದು ಬುದ್ಧಿಮಾತು ಹೇಳಿದ ಎನ್ನುವ ಕಾರಣಕ್ಕೆ ನೊಂದು ತಮ್ಮ ಆತ್ಮಹತ್ಯೆ ಮಾಡಿಕೊಂಡರೆ, ತನ್ನಿಂದಾಗಿ ತಮ್ಮ ಮೃತಪಟ್ಟ ಸುದ್ದಿ ಕೇಳಿ, ತಮ್ಮನೂ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದೆ.
ಅಣ್ಣ- ತಮ್ಮಂದಿರ ಚಿತೆಗಳು ಅಕ್ಕ‍ಪಕ್ಕದಲ್ಲಿಯೇ ಉರಿಯುತ್ತಿರುವುದನ್ನು ಕಂಡ ಕುಟುಂಬಸ್ಥರು ಮಾತ್ರವಲ್ಲದೇ ಗ್ರಾಮಸ್ಥರೂ ಕಣ್ಣೀರಿಟ್ಟಿದ್ದಾರೆ.ವೆಂಕಟೇಶ್(28) ಮತ್ತು ಹರೀಶ್(26) ಮೃತ ಸೋದರರು.
ರೈತನಾಗಿದ್ದ ಹರೀಶ್​ ಟ್ರ್ಯಾಕ್ಟರ್ ಚಾಲಕನಾಗಿದ್ದ. ಆತ ತುಂಬಾ ಅಜಾಗರೂಕತೆಯಿಂದ ಟ್ರ್ಯಾಕ್ಟರ್‌ ಚಾಲನೆ ಮಾಡುತ್ತಿದ್ದ. ಹೀಗೆ ಮಾಡಿದರೆ ಅನಾಹುತ ಸಂಭವಿಸಬಹುದು ಎನ್ನುವ ಕಾರಣಕ್ಕೆ ಅಣ್ಣ ವೆಂಕಟೇಶ್‌ ತಮ್ಮನಿಗೆ ಬುದ್ಧಿಮಾತು ಹೇಳಿದ್ದ. ಈ ಮೊದಲು ತಂದೆ ಕೂಡ ಆತನಿಗೆ ಬುದ್ಧಿ ಹೇಳಿದ್ದರು. ಆದರೆ ಅಣ್ಣ ಬೈದು ಬುದ್ಧಿಮಾತು ಹೇಳಿದ್ದನ್ನು ತಮ್ಮ ಹರೀಶ್‌ ಸಹಿಸದಾದ.
ಇದರಿಂದ ನೊಂದುಕೊಂಡು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ನೇಣು ಬಿಗಿದುಕೊಂಡಿರುವ ದೃಶ್ಯಗಳನ್ನು ಅಣ್ಣನ ಮೊಬೈಲ್ ಫೋನ್​ಗೆ ಕಳುಹಿಸಿದ್ದರು ಸ್ನೇಹಿತರು.
ಅವನ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಲೇ ಅಣ್ಣ ವೆಂಕಟೇಶ್‌ ತನ್ನಿಂದಾಗಿ ತಮ್ಮ ಮೃತಪಟ್ಟಿರುವುದನ್ನು ಅರಗಿಸಿಕೊಳ್ಳಲಾಗದೇ ಮಾನಸಿಕವಾಗಿ ಕುಸಿದಿದ್ದ. ಇದರಿಂದ ತುಂಬಾ ನೊಂದುಕೊಂಡ ಆತ ರಸ್ತೆ ಬದಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
VIDEO: ಶಿವಾಜಿ ಪ್ರತಿಮೆ ಅನಾವರಣಕ್ಕೆ ಪೊಲೀಸರು ತಡೆದಾಗ ಪ್ರಕೃತಿಯಿಂದಲೇ ನಡೆಯಿತು ಈ ವಿಸ್ಮಯ!

ಬೇರೆಯವರ ಎದುರು ಮಾತ್ರ ಮುದ್ದಾಡುವ ಪತಿಯ ಹಿಂಸೆ ತಾಳದಾಗಿದೆ- ಕಾನೂನಿನಡಿ ಪರಿಹಾರವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 16 =
Remember me
