ಬೆಂಗಳೂರು:ಕರೋನಾ ಸೋಂಕಿನಿಂದ ನಿನ್ನೆ ರಾತ್ರಿ ಇಲ್ಲಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚಿಕಿತ್ಸೆಗೆ ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುಖ್ಯಮಂತ್ರಿಗಳಿಗೆ ಕರೊನಾ ಪಾಸಿಟಿವ್‌ ರಿಪೋರ್ಟ್‌ ಬಂದಿದ್ದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ನಿನ್ನೆ ಟ್ವೀಟ್‌ ಮಾಡಿದ್ದ ಯಡಿಯೂರಪ್ಪನವರು, ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್​ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್​-19 ಟೆಸ್ಟ್​ಗೆ ಒಳಗಾಗಿ ಎಂದು ಹೇಳಿದ್ದರು.ತಮ್ಮ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್​ಗೆ ಒಳಗಾಗಿ ಎಂದೂ ಮನವಿ ಮಾಡಿದ್ದರು.
ಇಂದು ಬೆಳಗ್ಗೆ ಅವರ ಆರೋಗ್ಯ ಕುರಿತಂತೆ ಇದೀಗ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಬಹಳ ಹತ್ತಿರದಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕರೊನಾ: ಬೆಂಗಳೂರು ಪ್ರಥಮ- ಕೊಡಗು ಕೊನೆ: ನಿಮ್ಮ ಜಿಲ್ಲೆಯ ಡಿಟೇಲ್ಸ್‌ ಇಲ್ಲಿದೆ ನೋಡಿ…
ಕರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದ ಕಾರಣ ಪ್ರತಿ ಭಾನುವಾರ ಅವರಿಗೆ ಕರೊನಾ ಪರೀಕ್ಷೆ ಮಾಡಲಾಗುತ್ತಿತ್ತು.
ಇತ್ತೀಚೆಗೆ ಸಿಎಂ ಕಚೇರಿ-ನಿವಾಸ ಸೇರಿ 7 ಜನರಲ್ಲಿ ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡ ಒಂದು ವಾರ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದರು. ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿದುಬಂದಿದೆ.
ಇದರೊಂದಿಗೆ ಯಡಿಯೂರಪ್ಪ ಅವರು ಕರೊನಾ ಸೋಂಕಿಗೆ ಒಳಗಾದ ದೇಶದ 2ನೇ ಮುಖ್ಯಮಂತ್ರಿಯಾಗಿದ್ದಾರೆ. ಈ ಮೊದಲು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪಾಟಿಸಿವ್ ಬಂದಿದೆ.
ಕಂದನಿಗೆ ಮುಳುವಾಯ್ತು ಕಂಟೈನ್‌ಮೆಂಟ್‌ ಜೋನ್‌! ನಾಣ್ಯ ನುಂಗಿದರೂ ಚಿಕಿತ್ಸೆ ಕೊಡಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
