ಬೆಂಗಳೂರು:ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.
ನಿನ್ನೆ ಯಡಿಯೂರಪ್ಪನವರಿಗೆ ಕರೊನಾ ಸೋಂಕಿನ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ನೆಗೆಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಎರಡು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ಇಟ್ಟುಕೊಂಡು ಮಂಗಳವಾರ (ಆ.11) ಡಿಸ್‌ಜಾರ್ಜ್‌ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.
ತಮಗೆ ಕರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಇದೇ 2ರ ಭಾನುವಾರ ಯಡಿಯೂರಪ್ಪನವರು ಟ್ವೀಟ್‌ ಮಾಡಿದ್ದರು.
ಇವರಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಮಾಮೂಲಿ ಪರೀಕ್ಷೆ ಮಾಡಿಸಿದಾಗ ಕರೊನಾ ಪಾಸಿಟಿವ್‌ ದಾಖಲಾಗಿತ್ತು. ವಯಸ್ಸಿನ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ:ಹಿಂದೂ ರಾಷ್ಟ್ರಕ್ಕೆ ನಿಮ್ಮ ಕೊಡುಗೆ ಅಮೂಲ್ಯ ಎಂದು ಯೋಗಿಗೆ ಪತ್ರ ಬರೆದರಾ ಮೋದಿ ? ಸತ್ಯ ಏನು?
ಆಸ್ಪತ್ರೆಯಲ್ಲಿ ಇದ್ದುಕೊಂಡೇ ಹಲವಾರು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯಡಿಯೂರಪ್ಪನವರಿಗೆ ನಿನ್ನೆ ಪರೀಕ್ಷೆ ಮಾಡಿದಾಗ ಕರೊನಾ ನೆಗೆಟಿವ್‌ ವರದಿ ಬಂದಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.
ಈ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.
ಮದುವೆ ಮಾಡಿಸು ಎಂದ ವಿಧುರ ಅಳಿಯನ ಶಿರಚ್ಛೇದನ ಮಾಡಿದ ಮಾವ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × two =
Remember me
