ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು.
ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಅಬಕಾರಿ ಇಲಾಖೆಗಳ ತೆರಿಗೆ ಸಂಗ್ರಹ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಸ್ಥಿತಿ ಇದ್ದಾಗ್ಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು, ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಹಿಂಪಡೆದ ನಂತರ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಹೊಂದಿರುವುದಾಗಿ ತಿಳಿಸಿದರು.
ವಾಣಿಜ್ಯ ತೆರಿಗೆ:ರಾಜ್ಯದಲ್ಲಿ 2020-21ರಲ್ಲಿ 82,443 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಗೆ ಎದುರಾಗಿ 82,462 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ 65,659 ಕೋಟಿ ರೂ. ಜಿ.ಎಸ್.ಟಿ. ಮೂಲಕ, ಪೆಟ್ರೋಲ್/ ಡೀಸೆಲ್ ಮೇಲಿನ ತೆರಿಗೆ ಮೂಲಕ 15,861 ಕೋಟಿ ರೂ. ಹಾಗೂ ವೃತ್ತಿ ತೆರಿಗೆ ಮೂಲಕ 942 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.
ಪ್ರಸ್ತುತ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಒಟ್ಟು 11,409 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ವಾರ್ಷಿಕ ಗುರಿಯ ಶೇ. 14.92 ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಸ್ಟೇಟ್ ಜಿಎಸ್ ಟಿ ಸಂಗ್ರಹದಲ್ಲಿಯೂ ದ್ವಿತೀಯ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು.2022 ಕ್ಕೆ ಜಿ.ಎಸ್.ಟಿ. ಪರಿಹಾರ ವ್ಯವಸ್ಥೆ ಅಂತ್ಯವಾಗಲಿದೆ. ಇದನ್ನು ಇನ್ನಷ್ಟು ವರ್ಷಗಳ ಕಾಲ ವಿಸ್ತರಿಸುವಂತೆ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಅಬಕಾರಿ ಇಲಾಖೆ:ರಾಜ್ಯದಲ್ಲಿ 2021-22ನೇ ಸಾಲಿಗೆ ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಗುರಿ 24,580 ಕೋಟಿ ರೂ. ಗಳಾಗಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಒಟ್ಟು 4284.05 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಿಗೆ ಹೋಲಿಸಿದರೆ, ಈ ವರ್ಷ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. 2020-21ರಲ್ಲಿ 23,332.10 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಬೆಳವಣಿಗೆ ದರ ಶೇ. 8.10 ರಷ್ಟಿದೆ ಎಂದು ಅಧಿಕಾರಿಗಳು ವಿವರಿಸಿದರು.
ತೆರಿಗೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಏಕ್ ರೂಪ್ ಕೌರ್ ಹಾಗೂ ಪಿ.ಸಿ. ಜಾಫರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್, ಅಬಕಾರಿ ಇಲಾಖೆ ಆಯುಕ್ತ ಬಿ.ಲೋಕೇಶ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹುಡುಗಿ ಫಿಕ್ಸ್‌ ಆದ್ರೂ ಮದ್ವೆಯಾಕೆ ಮಾಡ್ತಿಲ್ಲ? ಟವರ್‌ ಏರಿ ಕುಳಿತ ವಿಜಯನಗರದ ಕುವರ!

ಸಿಂಗಲ್‌ ಇದ್ದು ಎಲ್ಲರಿಗೂ ಲಭ್ಯಳಿದ್ದೇನೆ: ಮೂರನೇ ಮದುವೆ ಮುರಿದು ನಾಲ್ಕನೆಯದ್ದಕ್ಕೆ ಸಿದ್ಧಳಾದ ನಟಿ!

ನೋಡಬಾರದ್ದನ್ನು ಅಮ್ಮ ನೋಡಿದಳು- ಅದಕ್ಕಾಗಿ ವಿಚ್ಛೇದನ ಕೊಟ್ಟೆ: ಬಹು ವರ್ಷಗಳ ಸತ್ಯ ಬಿಚ್ಚಿಟ್ಟ ಶಿಲ್ಪಾ ಶೆಟ್ಟಿ ಪತಿ ಕುಂದ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
