ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್​.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್​ಕುಮಾರ್​ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್‌ಸ್ಪೆಕ್ಟರ್‌ ಅವರಿಗೆ ಕೋರ್ಟ್​ ಸೂಚಿಸಿದೆ.
ದೂರಿನಲ್ಲಿ ಬಿ.ಎಸ್‌.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್‌ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್​ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಬಿಎಸ್‌ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಗೋವಾ ಕಾಂಗ್ರೆಸ್​ನಲ್ಲಿ ಮತ್ತೆ ಕೋಲಾಹಲ! ಬಿಜೆಪಿಯ ಕೈ ಹಿಡಿಯಲಿದ್ದಾರಾ ಎಂಟು ಶಾಸಕರು?

ಕ್ಯಾನ್ಸರ್​ಗೆ ಆಹ್ವಾನ! ದಿನನಿತ್ಯ ಬಳಸುತ್ತಿರೋ ಮತ್ತಷ್ಟು ಮೆಡಿಸಿನ್​ ಬ್ಯಾನ್​- ಅವುಗಳ ಪಟ್ಟಿ ಇಲ್ಲಿದೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × five =
Remember me
