ನವದೆಹಲಿ:ಸುಮಾರು 12 ಕೋಟಿ ರೂಪಾಯಿಗಳ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ತನಿಖೆ ಮುಂದುವರೆಸಲು ಒಪ್ಪಿಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ಪುರಸ್ಕರಿಸಿದ್ದು, ಮಧ್ಯಂತರ ತಡೆ ನೀಡಿದೆ.
ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್​ ಜಾರಿಗೊಳಿಸಲಾಗಿದೆ. ಕೊನದಾಸಪುರದಲ್ಲಿ ಬಿಡಿಎಯಿಂದ ಫ್ಲ್ಯಾಟ್ ನಿರ್ಮಾಣದಲ್ಲಿ ಅಕ್ರಮ ಎಸಗಿರುವ ಆರೋಪ ಹೊತ್ತ ಪ್ರಕರಣ ಇದಾಗಿದೆ.
‘ನನ್ನ ವಿರುದ್ಧದ ಲಂಚ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇರಲಿಲ್ಲ. ಹಾಗಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಜನಪ್ರತಿನಿಧಿಯಾಗಿರುವ (ಮುಖ್ಯಮಂತ್ರಿ) ಸಮಯದಲ್ಲಿ ನಡೆದಿದೆ ಎನ್ನಲಾದ ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ರಾಜ್ಯಪಾಲರ ಪೂರ್ವಾನುಮತಿ ಅಗತ್ಯವಾಗಿತ್ತು. ಆದರೆ ಇದನ್ನು ಮೀರಲಾಗಿದೆ, ಆದ್ದರಿಂದ ಹೈಕೋರ್ಟ್​ ತೀರ್ಪಿಗೆ ತಡೆ ನೀಡಬೇಕು’ ಎಂದು ಯಡಿಯೂರಪ್ಪ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್​ ಮಾನ್ಯ ಮಾಡಿದೆ.
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಸಚಿವ ಎಸ್.ಟಿ. ಸೋಮಶೇಖರ್ ಬಿಡಿಎ ಅಧ್ಯಕ್ಷ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಪ್ರಕರಣ ಇದಾಗಿದೆ. ಈ ಅಕ್ರಮ ಪ್ರಕರಣದಲ್ಲಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಕೂಡ ಆರೋಪಿ ಆಗಿದ್ದಾರೆ. ಒಟ್ಟು ಒಂಬತ್ತು ಮಂದಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿತ್ತು(ಏಜೆನ್ಸೀಸ್​)
ಬಿಎಸ್​ವೈಗೆ ಬಿಗ್​ ಶಾಕ್​: ಭ್ರಷ್ಟಾಚಾರದ ಆರೋಪದಡಿ ಎಫ್​ಐಆರ್​ ದಾಖಲಿಸಿ ತನಿಖೆಗೆ ಕೋರ್ಟ್​ ಆದೇಶ
ಸೋನಿಯಾರನ್ನು ಭೇಟಿಯಾಗಲಿರುವ ನಿತೀಶ್​, ಲಾಲೂ! ಅಪರೂಪದ ಬೆಳವಣಿಗೆಗೆ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:12 − ten =
Remember me
