ಬೆಂಗಳೂರು:ಮಾಜಿ ಸಚಿವ ಎಚ್‌.ಎಂ ರೇವಣ್ಣ ಅವರಿಗೆ ಬೆಂಗಳೂರಿನಲ್ಲಿ ಇಂದು ಅಭಿನಂದನೆ ಸಮಾರಂಭ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜನೆ ಮಾಡಿರುವ ಈ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್​ ಸ್ಫೋಟಕ ಹೇಳಿಕೆ ನೀಡಿದ್ದು, ಬರುವ ಮೇ 1ರಂದು ನಾಲ್ಕು ಮಂದಿ ಗಣ್ಯರ ಕೊಲೆ ಮಾಡುವ ಬೆದರಿಕೆ ಪತ್ರ ಬಂದಿರುವುದಾಗಿ ಹೇಳಿದ್ದಾರೆ.
ಬಿಜೆಪಿ ಶಾಸಕ ಸಿ ಟಿ ರವಿ, ಪತ್ರಕರ್ತ ರಂಗಣ್ಣ, ನಟ ಶಿವರಾಜಕುಮಾರ್ ಹಾಗೂ ತಮ್ಮನ್ನು ಕೊಲೆ ಮಾಡುವ ಪತ್ರ ಬಂದಿದೆ. ಅದನ್ನು ಪೊಲೀಸರು ಪರಿಶೀಲನೆ ಮಾಡ್ತಾ ಇದ್ದಾರೆ ಎಂದು ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನದಾಗಿ ಅವರು ಯಾವುದೇ ವಿವರಣೆ ನೀಡಲಿಲ್ಲ.
ಬದಲಿಗೆ, ಸಿ ಟಿ ರವಿರನ್ನು ಕೊಲೆ ಮಾಡಿದ್ರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದ್ರೆ ಸಿ ಟಿ ರವಿ ಉಳಿತಾರೆ. ಇಂತಹ ಸಂದರ್ಭ ಎದುರಾಗಿದೆ ಎಂದು ನಿಗೂಢವಾಗಿ ಹೇಳಿದರು. ನಾನು ಈ ಬೆದರಿಕೆ ಪತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಕೊಲೆ ಮಾಡೋದಾದರೆ ಎಲ್ಲಿ ಬೇಕಾದರೂ ಕೊಲೆ ಮಾಡ್ತಾರೆ. ಹಾಗಾಗಿ ನಾನು ಹೆದರದೇ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿದ್ದೇನೆ ಎಂದು ಬಿ.ಟಿ.ಲಲಿತಾ ನಾಯಕ್​ ಹೇಳಿದರು. .
ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಸಭಾಪತಿ ಬಸವರಾಜ್ ಹೊರಟ್ಟಿ, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕವಿ ಪ್ರೊ.ಸಿದ್ದಲಿಂಗಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರೇವಣ್ಣ ಜೀವನ ಕುರಿತು ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಯಿತು.
ಸಿಡಿ ಗ್ಯಾಂಗ್​ನ ಕೈ ಹಿಡಿತಿದೆಯೇ ರಾಜಸ್ಥಾನ? ದುಡ್ಡು ಖಾಲಿಯಾಗ್ತಿದ್ದಂತೆಯೇ ಎಸ್ಕೇಪ್​ ಆದ್ರು ಆರೋಪಿಗಳು

ಬಸವಕಲ್ಯಾಣದಿಂದ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯುವರೆ?ಸಿಎಂ ಯಡಿಯೂರಪ್ಪ ಏನು ಹೇಳಿದ್ರು ನೋಡಿ…

ಮೋಜು- ಸಭೆ ಸಮಾರಂಭಗಳ ಮೇಲೆ ಪುನಃ ಕರೊನಾ ಕರಿನೆರಳು: ಸಚಿವರು ನೀಡಿರೋ ಎಚ್ಚರಿಕೆ ಇಲ್ಲಿದೆ ನೋಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − 1 =
Remember me
