ಬೆಂಗಳೂರು:ಆರನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದಾಗಲೇ ಸಾರಿಗೆ ನೌಕಕರು ಮುಷ್ಕರ ಆರಂಭಿಸಿದ್ದು, ನಾಳೆ (ಏ.7) ಬಸ್‌ ಸಂಚಾರ ಸ್ಥಗಿತಕ್ಕೆ ನಿರ್ಧರಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ನಡೆದ ಧರಣಿ ವೇಳೆ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್‌.ಚಂದ್ರಶೇಖರ್‌, ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಖಂಡಿತ ಎಂದಿದ್ದಾರೆ.
ಸರ್ಕಾರ ಇದಾಗಲೇ ಕೆಲವು ಸುತ್ತಿನ ಮಾತುಕತೆ ನಡೆಸಿದ್ದರೂ ಪ್ರಯೋಜನ ಆಗಿಲ್ಲ. ಈ ಹಿನ್ನೆಲೆಯಲ್ಲಿ, ಇದೀಗ ಸರ್ಕಾರವೇ ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲು ನಿರ್ಧರಿಸಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ ಎಂದುಕೆಎಸ್‍ಆರ್‌ಟಿಸಿ ಆಯುಕ್ತ ಶಿವಕುಮಾರ್ ಹೇಳಿದ್ದಾರೆ.
ಸಾಮಾನ್ಯವಾಗಿ ಇಂಥ ಸಂದರ್ಭಗಳಲ್ಲಿ ದುರ್ಲಾಭ ಪಡೆದು ಖಾಸಗಿ ವಾಹನಗಳು 2-3 ಪಟ್ಟು ಹೆಚ್ಚು ಹಣ ವಸೂಲಿಗೆ ಮುಂದಾಗುವುದು ಸಹಜ. ಆದ್ದರಿಂದ ಈ ಕುರಿತು ಎಚ್ಚರಿಕೆ ನೀಡಿರುವ ಸರ್ಕಾರ, . ಪರಿಸ್ಥಿತಿಯ ಲಾಭ ಪಡೆದು ಯಾರಾದರೂ ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್‍ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು.
ಸರ್ಕಾರ ನಿಗದಿಪಡಿಸಿರುವ ದರವನ್ನೇ ಪ್ರಯಾಣಿಕರಿಂದ ಪಡೆಯಬೇಕು. ಅಪ್ಪಿತಪ್ಪಿಯೂ ಹೆಚ್ಚಿನ ದರ ಪಡೆದಿರುವುದು ನಮ್ಮ ಗಮನಕ್ಕೆ ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಅದಕ್ಕೆ ಯಾರೂ ಅವಕಾಶ ಕೊಡಬಾರದು ಎಂದು ಶಿವಕುಮಾರ್ ಮನವಿ ಮಾಡಿದರು.
ಸಾರಿಗೆ ನೌಕರರಿಗೂ ಶಾಕ್‌ – ಜನರಿಗೂ ಮುಷ್ಕರದ ಬಿಸಿ? ಮಾತು ಆಡಲ್ಲ: ಸರ್ಕಾರದಿಂದ ಖಡಕ್‌ ವಾರ್ನಿಂಗ್‌

ರಾಜ್ಯದಲ್ಲಿ ಶುರುವಾಗಲಿದೆ ಮಳೆ- ಎಲ್ಲಿ? ಯಾವಾಗ? ಹವಾಮಾನ ಇಲಾಖೆ ಏನು ಹೇಳಿದೆ ನೋಡಿ…

ರಂಗೇರಿದೆ ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿ ಕಾರ್ಯಕರ್ತನ ಮನೆಗೆ ಇವಿಎಂ, ವಿವಿಪ್ಯಾಟ್‌!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + three =
Remember me
