ರಾಯಚೂರು :ಕೆಲವು ರಾಜ್ಯಗಳಲ್ಲಿ ಚುನಾವಣೆ ಭರಾಟೆ ಜೋರಾಗಿದ್ದರೆ, ಸದ್ಯ ಕರ್ನಾಟಕದಲ್ಲಿ ಉಪಚುನಾವಣೆ ಸದ್ದು ಮಾಡುತ್ತಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಬೀದರ್​ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಇದಾಗಲೇ ಹಲವಾರು ಸುದ್ದಿಗಳು ಹರಿದಾಡುತ್ತಿವೆ.
ಈ ನಡುವೆಯೇ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರದಾಡುತ್ತಿದೆ. ಅದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿಗಳು, ಈ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ ಎಂದಿದ್ದಾರೆ.
ಸಿಂಧನೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಇಂದು ಬೆಳಗ್ಗೆ ಕೆ. ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಉಪಹಾರ ಸೇವನೆಗೆ ಬಂದಿದ್ದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧಿಸುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದರು.
ಮೈಸೂರಿನಲ್ಲಿಯೆ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡಲಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ. ಅಲ್ಲದೇ ಮುಂದಿನ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದ್ದು, ಈ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಇನ್ನು ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಶೀಘ್ರದಲ್ಲಿ ಅಭ್ಯರ್ಥಿ ಘೋಷಣೆ ಮಾಡಲಿದ್ದೇವೆ. ಅಭ್ಯರ್ಥಿ ಘೋಷಣೆಗೂ ಮೊದಲೇ ಬಿಜೆಪಿ ಈ ಕ್ಷೇತ್ರಗಳಲ್ಲಿ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ’ ಎಂದು ಸಿಎಂ ಹೇಳಿದರು.
ಸಿಎಂ ಸಾಹೇಬ್ರೆ… ಹೊಗಳುಭಟ್ಟರ ಕಾಲ ಹೋಯ್ತು… ನಿಮ್​ ಸುತ್ತಲೂ ಇರೋ ಬ್ಯಾಂಡ್​ಸೆಟ್​ನವ್ರನ್ನ ನಿಯಂತ್ರಿಸಿ…

ಕಾಮೆಡ್​-ಕೆ ಪರೀಕ್ಷಾರ್ಥಿಗಳಿಗೆ ಗುಡ್​ನ್ಯೂಸ್​: ಕೌನ್ಸೆಲಿಂಗ್​ ವೇಳಾಪಟ್ಟಿ ಗೊಂದಲ ಈ ವರ್ಷ ಇರಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
