ಮಂಡ್ಯ: ನಟ ಜೈಜಗದೀಶ್‌ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ ತಿಳಿದುಬಂದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್‌ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಇದೇ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್‌ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
VIDEO: ವಿದ್ಯಾರ್ಥಿನಿ ಜತೆ ಬೆಳಗಾವಿ ಶಿಕ್ಷಕನ ’ರೊಮಾನ್ಸ್‌’: ಮದುವೆ ತಡೆಯಲು ಫೋಟೋ ವೈರಲ್‌ ಮಾಡಿ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
