ಬೆಂಗಳೂರು:ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳ ಗ್ಯಾಂಗ್ ಅನ್ನು ಬಂಧಿಸಿರುವ ಸಿಸಿಬಿ ಪೊಲೀಸರು 90 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಸುಮಿತ್ರಾ, ಸೀತಾ ಹಾಗೂ ಚಂದ್ರಶೇಖರ್ ಬಂಧಿತ ಗ್ಯಾಂಗ್‌ನ ಆರೋಪಿಗಳಾಗಿದ್ದಾರೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
ಆರೋಪಿಗಳು ಆಂಧ್ರ ಪ್ರದೇಶದ ವಿಶಾಖಪಟ್ಟಣದ ಜಿಲ್ಲೆಯ ತುನಿ ಗ್ರಾಮಕ್ಕೆ ತೆರಳಿ ಅಲ್ಲಿರುವ ಪರಿಚಯಸ್ಥರಿಂದ ಮಾದಕ ವಸ್ತುಗಳನ್ನು ಖರೀದಿಸಿ, ಗಾಂಜಾ, ಹ್ಯಾಶಿಶ್ ಆಯಿಲ್ ಕಳ್ಳ ಸಾಗಣೆ ಮಾಡಿಕೊಂಡು ಬಂದು ನಗರದ ವಿವಿಧ ಕಡೆಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮಾಗಡಿ ರಸ್ತೆ ಬಳಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳ ಬಗ್ಗೆ ಖಚಿತವಾದ ಮಾಹಿತಿಯನ್ನು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಡ್ರಗ್ ಪೆಡ್ಲರ್‌ಗಳಿಂದ 940 ಗ್ರಾಂ ಹ್ಯಾಶಿಶ್ ಆಯಿಲ್, 10 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಎರಡು ಮೊಬೈಲ್ ೆನ್ ವಶಕ್ಕೆ ಪಡೆಯಲಾಗಿದ್ದು, ಇವುಗಳ ಮೌಲ್ಯ 90 ಲಕ್ಷ ರೂ. ಆಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಇಬ್ಬರು ಹೆಂಡಿರ ಗೌರಿಬಿದನೂರು ಗಂಡ! ವಿವಾಹಿತೆಗೂ ಮೋಸ ಮಾಡಿ ಮತ್ತೊಂದು ಮದ್ವೆ: ಪತಿಗಾಗಿ ಇಬ್ಬರ ಜಗಳ
ಹೊನ್ನಾವರ-ಜೋಗ ರಸ್ತೆಯಲ್ಲಿ ಭೂಕುಸಿತ: ವಾಹನ‌ ಸಂಚಾರ ಸ್ಥಗಿತ- ಪರ್ಯಾಯ ಮಾರ್ಗ ಹೀಗಿದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 5 =
Remember me
