ಧಾರವಾಡ:ಕೋವಿಡ್‌ ಸೋಂಕಿನಿಂದಾಗ ಕಳೆದ ಕೆಲವು ದಿನಗಳಿಂದ ಇಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚನ್ನವೀರ ಕಣವಿ ಅಸ್ತಂಗತರಾಗಿದ್ದಾರೆ. ಇವರಿಗೆ 93 ವರ್ಷ ವಯಸ್ಸಾಗಿತ್ತು.
ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1928ರ ಜೂನ್‌ 28ರಂದು  ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ಹುಟ್ಟಿದ್ದ ಕಣವಿಯವರ ತಂದೆ ಸಕ್ಕರೆಪ್ಪ ಗದಗ ತಾಲೂಕಿನ ಶಿರುಂದದಲ್ಲಿ ಶಿಕ್ಷಕರಾಗಿದ್ದರು. ಹೀಗಾಗಿ ಶಿರುಂದದಲ್ಲಿಯೇ ಕಣವಿಯವರು ಬಾಲ್ಯ ಕಳೆದಿದ್ದಾರೆ. ನಾಲ್ಕನೇ ತರಗತಿವರೆಗೆ ಶಿರುಂದದಲ್ಲಿಯೇ ಶಿಕ್ಷಣ ಪಡೆದ ಅವರು ಧಾರವಾಡ ತಾಲೂಕಿನ ಗರಗ ಶಾಲೆಯಲ್ಲಿ 7ನೇ ತರಗತಿವರೆಗೆ ಶಿಕ್ಷಣ ಪಡೆದರು.
ಬಾಲ್ಯದಲ್ಲಿ ‘ಗಾಂಧಿ ಟೋಪಿ’ ನಾಟಕದಲ್ಲಿ ಅಭಿನಯಿಸಿದ್ದ ಕಣವಿಯವರು ಅಲ್ಲಿಂದಲೇ ಪ್ರಸಿದ್ಧ ಪಡೆದವರು. ಮುಲ್ಕಿ ಪರೀಕ್ಷೆಯಲ್ಲಿ ಧಾರವಾಡ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಧಾರವಾಡದ ಮುರುಘಾಮಠದಲ್ಲಿದ್ದುಕೊಂಡು ಹೈಸ್ಕೂಲ್ ಶಿಕ್ಷಣ ಪಡೆದು ಕರ್ನಾಟಕ ಕಾಲೇಜಿನಲ್ಲಿ ಬಿಎ ಶಿಕ್ಷಣ ಪಡೆದರು. ಕಾಲೇಜ್ ವಿದ್ಯಾರ್ಥಿಯಾಗಿದ್ದಾಗ ಕಣವಿಯವರ ಕವನಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಹಾರೈಸಿದ್ದರು ಡಿವಿಜಿ. ಧಾರವಾಡದ ಮಾಳಮಡ್ಡಿಯಲ್ಲಿ ಕಾವ್ಯಾನುಭವ ಮಂಪಟ ಆರಂಭಿಸಿ ಕವಿತಾ ವಾಚನ ಅಭಿಯಾನ ನಡೆಸಿದ್ದ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು.
ಅದೇ ಕವಿವಿಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಆರಂಭಿಸಿದ್ದ ಅವರು, 1956ರಲ್ಲಿ ಅದೇ ಪ್ರಸಾರಾಂಗ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ ಸಲ್ಲಿಸಿದರು. ಪತ್ನಿ ಶಾಂತಾದೇವಿ ಕೂಡ ಸಾಹಿತಿ, ಕನ್ನಡದ ಖ್ಯಾತಿ ಕತೆಗಾರ್ತಿಯಾಗಿದ್ದ ಅವರು ಇತ್ತೀಚೆಗೆ ನಿಧನರಾಗಿದ್ದರು. ಪತ್ನಿ ನಿಧನದ ಬಳಿಕ ಸ್ವಲ್ಪ ಲವಲವಿಕೆ ಕಳೆದುಕೊಂಡಿದ್ದರು ಕಣವಿಯವರು.
ವಿಶ್ವಭಾರತಿಗೆ ಕನ್ನಡದಾರತಿ…, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ…, ಹೂವು ಹೊರಳುವುವು ಸೂರ್ಯನ ಕಡೆಗೆ…, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ… ಜನಪ್ರಿಯ ಕಾವ್ಯಗಳು.
ಕವನ ಸಂಕಲನಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನ ಪ್ರಕಟವಾಗಿವೆ.
ವಿಮರ್ಶಾ ಕೃತಿಗಳು:ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ವಿಮರ್ಶಾತ್ಮಕ ಕೃತಿಗಳು.
ಮಕ್ಕಳ ಕೃತಿ:ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಕವನ ಸಂಕಲನಗಳು.
ಪ್ರಶಸ್ತಿ ಮತ್ತು ಪುರಸ್ಕಾರಗಳು* 1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ* 1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ* 2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ* ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,* ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ,* ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
–BJP KARNATAKA (@BJP4Karnataka)16 Feb 2022

–Dr. Murugesh R Nirani (@murugesh_nirani)16 Feb 2022

–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)16 Feb 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
