ಬೆಂಗಳೂರು:ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರಕ್ಕೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪುನೀತ್​ ಅವರನ್ನು ಕೊಂಡಾಡಿದರು.
ಅಪ್ಪು ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.
ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ. ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.
–Basavaraj Bommai (@bsbommai)17 Mar 2022

ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ: ನಟ ಶಿವರಾಜ್​ಕುಮಾರ್​

ಇಂದು ಈ ಸಲೂನ್​ಗೆ ಯಾರೇ ಬಂದ್ರೂ ಹೇರ್ ಕಟಿಂಗ್, ಶೇವಿಂಗ್ ಉಚಿತ! ಅಭಿಮಾನ ಮೆರೆದ ಅಪ್ಪು ಫ್ಯಾನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + seven =
Remember me
