ಮಂಗಳೂರು:ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಮನೆಗೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.
ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಸ್ತೆ ಮೂಲಕ ಬೆಳ್ಳಾರೆಯ ನೆಟ್ಟಾರ್ ನಲ್ಲಿರುವ ಪ್ರವೀಣ್ ಮನೆಗೆ ಸಂಜೆ 6.30ಕ್ಕೆ ಭೇಟಿ ನೀಡಲಿರುವುದಾಗಿ ತಿಳಿದುಬಂದಿದೆ.
ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಮುಖ್ಯಮಂತ್ರಿಗಳು, ರಾತ್ರಿ10.15 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಪ್ರವೀಣ್​ ಹತ್ಯೆ ಖಂಡಿಸಿ, ಭಾರಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಉಪವಿಭಾಗ ವ್ಯಾಪ್ತಿಯಾಗಿರುವ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ವ್ಯಾಪ್ತಿಗೆ ಆದೇಶ ಜಾರಿಯಾಗಿದೆ.(ದಿಗ್ವಿಜಯ ನ್ಯೂಸ್​)
ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಗೆ ಇದೆಯೆ ಹಲಾಲ್ ನಂಟು? ಕೃತ್ಯಕ್ಕೂ ಮುನ್ನ ಆಗಿದ್ದೇನು?

ಹಂತಕರಿಂದ ಪ್ರವೀಣ್​​ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 7 =
Remember me
