ಬೆಂಗಳೂರು:ಯೂಕ್ರೇನ್​ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.
ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರ್ಕೀವ್​ನಿಂದ 3೦ ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಅಂದಾಜು 200 ಜನ ರಾಜ್ಯದ ವಿದ್ಯಾರ್ಥಿಗಳು ಕಾರ್ಕೀವ್​ನಲ್ಲಿ ಇದ್ದಾರೆ. ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಮಾತನಾಡಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ. ಕೆ ಗೋಪಾಲಯ್ಯ ಉಪಸ್ಥಿತರಿದ್ದರು.
ಕೇಂದ್ರಕ್ಕೆ ಹೇಗೆ ಧನ್ಯವಾದ ಸಲ್ಲಿಸಬೇಕೋ ತಿಳಿಯುತ್ತಿಲ್ಲ ಎನ್ನುತ್ತಲೇ ಪರಿಹಾರಿ ನಿಧಿಗೆ ಧನ ಸಹಾಯ ಮಾಡಿದ ಅಪ್ಪ…

ಅಮ್ಮನನ್ನು ನೋಡಿಕೋ ಎಂದರೆ ಟಾಯ್ಲೆಟ್​ ಕ್ಲೀನರ್​​ ಹಾಕಿ ಕಣ್ಣಿನ ದೃಷ್ಟಿಯನ್ನೇ ತೆಗೆದ ಕೇರ್​ ಟೇಕರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − sixteen =
Remember me
