ಬೆಂಗಳೂರು:ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿರುವ ಮಹಿಳೆಯೊಬ್ಬಳಿಂದ ತಾವು ಮೋಸ ಹೋಗಿರುವುದಾಗಿ ಬಿಜೆಪಿ ರಾಷ್ಟ್ರೀಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಹಾಗೂ ಡಾ. ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ ಚಿ.ನಾ. ರಾಮು ದೂರು ದಾಖಲು ಮಾಡಿದ್ದಾರೆ.ಅಪರಿಚಿತ ವ್ಯಕ್ತಿಯೊಬ್ಬ ತಮಗೆ ಫೋನ್​ ಮೂಲಕ ಕರೆ ಮಾಡಿ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ತಮಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ರಾಮು ದೂರಿನಲ್ಲಿ ತಿಳಿಸಿದ್ದಾರೆ.ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಒಬ್ಬಾಕೆ ಪರಿಚಯವಾಗಿದ್ದಳು. ಅವಳು ನನ್ನ ಮೊಬೈಲ್​ ನಂಬರ್ ಪಡೆದುಕೊಂಡಿದ್ದಳು. ನಂತರ ವಿಡಿಯೋ ಕಾಲ್​ ಮಾಡಿ ತೀರಾ ಅಸಭ್ಯವಾಗಿ ವರ್ತಿಸಿದ್ದಳು. ನಾನು ಕರೆ ಕಟ್​ ಮಾಡಿದ್ದೆ. ಇಷ್ಟಾದ ಮೇಲೆ ಈಗ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾನೆ. ಯುವತಿಯೊಂದಿಗೆ ನಗ್ನವಾಗಿರುವ ನಿನ್ನ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ರಾಮು ದೂರಿನಲ್ಲಿ ತಿಳಿಸಿದ್ದಾರೆ.ಈ ಬೆದರಿಕೆಗೆ ಹೆದರಿ ಈಗಾಗಲೇ 31,500 ರೂ. ಹಣವನ್ನು ಅಪರಿಚಿತನ ಖಾತೆಗೆ ಜಮೆ ಮಾಡಲಾಗಿದೆ. ಆದರೆ ಮತ್ತೂ ಹಣದ ಬೆದರಿಕೆ ಹಾಕುತ್ತಿರುವುದಾಗಿ ಅವರು ಹೇಳಿದ್ದಾರೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾನೀಪುರಿ ಅಂದ್ರೆ ತುಂಬಾ ಇಷ್ಟನಾ? ಹಾಗಿದ್ರೆ ಈ ವಿಡಿಯೋ ಒಮ್ಮೆ ನೋಡಿ ಡಿಸೈಡ್​ ಮಾಡಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
