ಬೆಂಗಳೂರು:ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಈ ವರೆಗೂ ಪೊಲೀಸರು ಬಂಧಿಸುವ ಪ್ರಯತ್ನ ನಡೆಸಿಲ್ಲ ಹಾಗೂ ವಿಚಾರಣೆಗೂ ಒಳಪಡಿಸಿಲ್ಲ. ಆದ್ದರಿಂದ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಮಹಿಳೆಗೆ ಸೂಕ್ತ ರಕ್ಷಣೆ ಸಿಗುತ್ತಿಲ್ಲ ಎಂದು ಧರಣಿ ನಿರತರು ಆರೋಪಿಸಿದರು.
ಮಾಧ್ಯಮಗಳ ಮುಂದೆ ವೀರಾವೇಶವಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ ನಕಲಿ ಸೀಡಿ ಎಂದ ಮೇಲೆ ಯುವತಿಯನ್ನ ಹೆಸರನ್ನು ಪ್ರಸ್ತಾಪಿಸುವ ಅವಶ್ಯಕತೆ ಏಕೆ ಬಂತು ಎಂದು ಪ್ರಶ್ನಿಸಿದರು.
ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಹಾಗೂ ಪಕ್ಷದ ನಾಯಕರು ರಾಜಕೀಯಗೊಳಿಸಲು ಯತ್ನಿಸಿದೆ ಎಂದು ಆಪಾದಿಸಿದರು.
ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಮುಖರಾದ ಎಸ್. ಮನೋಹರ್, ಜಿ. ಜನಾರ್ದನ್, ಪ್ರಕಾಶ, ಆದಿತ್ಯ, ಉಮೇಶ್, ಚಂದ್ರಶೇಖರ್, ಪುಟ್ಟರಾಜು, ಶಶಿಭೂಷಣ್ ಮತ್ತಿತರರು ಹಾಜರಿದ್ದರು.
ಅವಳೇನು ವಿಜಯ ಮಲ್ಯನಾ? ನೀರವ್​ ಮೋದಿನಾ? ಸಿಡಿ ಲೇಡಿ ಕೇಸ್​ನಲ್ಲಿ ಸಿದ್ದು ಗರಂ…

ನಾಳೆ ನ್ಯಾಯಾಧೀಶರ​ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?

ಡಿಕೆಶಿಗಾಗಿಯೇ ಗೋವಾಕ್ಕೆ ಹೋಗಿದ್ದೆ ಎಂದ ಸಿಡಿ ಲೇಡಿ: ಯಾರ್ರಿ ಅವಳು ಅಂದ್ರು ‘ಬಂಡೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 1 =
Remember me
